
ಬೆಂಗಳೂರು, (ಜುಲೈ.21): ನಾಳೆಯಿಂದ (ಬುಧವಾರ) ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವಾಗಲಿದೆ. ಎಂದಿನಂತೆ ಚಟುವಟಿಕೆ ಮುಂದುವರೆಯಲಿದೆ.
ಹೌದು, ಬೆಂಗಳೂರಿನಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲಎಂದು ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದಿಂದ ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಹಿಂದಿನ ಆದೇಶದಂತೆ ರಾಜ್ಯಾದ್ಯಂತ ರಾತ್ರಿ 9.00 ಗಂಟೆಯಿಂದ ಬೆಳಗ್ಗೆ 5.00 ಗಂಟೆಯವರೆಗೆ ಕರ್ಫ್ಯೂ ಜಾರಿ ಇರಲಿದೆ. ಹಾಗೂ ಪ್ರತೀ ಭಾನುವಾರದ ಲಾಕ್ ಡೌನ್ ಮುಂದುವರಿಯಲಿದೆ.
ರಾಜ್ಯದ ಜನತೆಯನ್ನುದ್ದೇಶಿಸಿ ಸಿಎಂ ಮಾತು: ಮಹತ್ವದ ಮಾಹಿತಿ ಬಿಚ್ಚಿಟ್ಟ ಬಿಎಸ್‌ವೈ
ರಾಜ್ಯ ಸರ್ಕಾರ ಹಿಂದಿನ ಪ್ರಕಾರ ಜುಲೈ 5ರಿಂದ ಆಗಸ್ಟ್ 8ರ ವರೆಗೆ ಪ್ರತಿ ಭಾನುವಾರ ಲಾಕ್‌ಡೌನ್ ಇರಲಿದೆ. ಅಲ್ಲದೇ ಜುಲೈ 10ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿ ಆದೇಶ ನೀಡಲಾಗಿದೆ.
ಗೈಡ್‌ಲೈನ್ಸ್
* ಅನ್ ಲಾಕ್ 2.0 ಮಾರ್ಗಸೂಚಿಗಳ ಪ್ರಕಾರ ರಾಜ್ಯಾದ್ಯಂತ ರಾತ್ರಿ 9.00 ಗಂಟೆಯಿಂದ ಬೆಳಗ್ಗೆ 5.00 ಗಂಟೆಯವರೆಗೆ ಕರ್ಫ್ಯೂ ಸ್ಥಿತಿ ಜಾರಿಯಲ್ಲಿರುತ್ತದೆ.
* ಪ್ರಸ್ತುತ ಚಾಲ್ತಿಯಲ್ಲಿರುವಂತೆ ಪ್ರತೀ ಭಾನುವಾರದ ಲಾಕ್ ಡೌನ್ ಮುಂದುವರಿಯಲಿದೆ.
* ಜನಸಂದಣಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಗಳಲ್ಲಿ ತರಕಾರಿ ಮಾರುಕಟ್ಟೆಗಳನ್ನು ಎ.ಪಿ.ಎಂ.ಸಿ. ಅಥವಾ ಸೂಕ್ತ ವಿಶಾಲ ಪ್ರದೇಶಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದು.
* ಉದ್ಯಾನವನಗಳಲ್ಲಿ ಜಿಮ್ ಸಲಕರಣೆಗಳು ಹಾಗೂ ಕುಳಿತುಕೊಳ್ಳುವ ಬೆಂಚ್ ಗಳನ್ನು ಸಾರ್ವಜನಿಕರು ಬಳಸದಂತೆ ನಿಗಾ ವಹಿಸುವುದು.
ಇವುಗಳೊಂದಿಗೆ ಆಯಾ ಜಿಲ್ಲಾಡಳಿತಗಳ ಪ್ರತ್ಯೇಕ ಮಾರ್ಗಸೂಚಿಗಳು ಪ್ರಕಟಗೊಳ್ಳುವವರೆಗೂ ಅನ್ ಲಾಕ್ 2.0ರ ಮಾರ್ಗಸೂಚಿಯು ಈ ಮೇಲಿನ ಬದಲಾವಣೆಗಳೊಂದಿಗೆ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.
ರಾಜ್ಯದಲ್ಲಿ ಕೋವಿಡ್ 19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ ಸೇರಿದಂತೆ ಇನ್ನು ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಮರು ಜಾರಿಗೊಳಿಸಲಾಗಿತ್ತು. ಈ ಎಲ್ಲಾ ಜಿಲ್ಲೆಗಳು ಬುಧವಾರದಿಂದ ಅನ್‌ಲಾಕ್ ಆಗಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ