ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ರಾಜ್ಯಪಾಲರ ಫೋಟೋ ಹಾಕದೇ ಕೀಳು ರಾಜಕೀಯ ಮಾಡಿದ ಸರ್ಕಾರ: ಅಶೋಕ

Published : Feb 11, 2025, 04:02 PM IST
ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ರಾಜ್ಯಪಾಲರ ಫೋಟೋ ಹಾಕದೇ ಕೀಳು ರಾಜಕೀಯ ಮಾಡಿದ ಸರ್ಕಾರ: ಅಶೋಕ

ಸಾರಾಂಶ

ಜಾಗತಿಕ ಹೂಡಿಕೆದಾರರ ಸಮಾವೇಶದ ಜಾಹೀರಾತಿನಲ್ಲಿ ರಾಜ್ಯಪಾಲರ ಫೋಟೋ ಏಕಿಲ್ಲ? ಪ್ರವೇಶ ಶುಲ್ಕ ವಿಧಿಸಿ ಯುವ ಜನಾಂಗಕ್ಕೆ ಅವಕಾಶ ಕಿತ್ತ ಸರ್ಕಾರ. ಈ ಸಮಾವೇಶ ಯಾರಿಗೋಸ್ಕರ?

ಬೆಂಗಳೂರು (ಫೆ.11): ಇಂದು ಸಂಜೆ ಉದ್ಘಾಟನೆ ಆಗಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ರಾಜ್ಯ @INCKarnataka ಸರ್ಕಾರ ಎಲ್ಲಾ ದಿನಪತ್ರಿಕೆಗಳಲ್ಲೂ ಫುಲ್ ಪೇಜ್ ಜಾಹೀರಾತು ನೀಡಿದೆ. ಸಮಾವೇಶಕ್ಕೆ ನಮ್ಮ ಶುಭ ಹಾರೈಕೆಗಳು. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರಲಿ, ಕಳೆದ 20 ತಿಂಗಳುಗಳಿಂದ ಸಂಪೂರ್ಣವಾಗಿ ಸ್ಥಬ್ಧವಾಗಿರುವ ರಾಜ್ಯದ ಅಭಿವೃದ್ಧಿಗೆ ಇನ್ನು ಮುಂದೆಯಾದರೂ ಚುರುಕು ಸಿಗಲಿ ಎಂದು ಆಶಿಸುತ್ತೇನೆ.

ಆದರೆ ಹೂಡಿಕೆದಾರರ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವ ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರ ಫೋಟೋ ಜಾಹೀರಾತಿನಲ್ಲಿ ಯಾಕಿಲ್ಲ? ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿರುವ ಸನ್ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಯಾಕೆ ಹಾಕಿಲ್ಲ?

ಕೇವಲ ಸಿಎಂ, ಡಿಸಿಎಂ ಹಾಗು ಕೈಗಾರಿಕಾ ಸಚಿವರ ಫೋಟೋ ಹಾಕಲು ಹೂಡಿಕೆದಾರರ ಸಮಾವೇಶ ರಾಜಕೀಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಮಾವೇಶವಲ್ಲ. ಇಂತಹ ಜಾಗತಿಕ ಸಮಾವೇಶದ ಜಾಹೀರಾತಿನಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ @INCKarnataka ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ ಅಂತ ಭಾಷಣ ಬಿಗಿಯುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಫೋಟೋ ಹಾಕುವ ಕನಿಷ್ಠ ಶಿಷ್ಟಾಚಾರವನ್ನೂ ಪಾಲನೆ ಮಾಡುವ ಸೌಜನ್ಯವಿಲ್ಲ.

ಈ ಶಿಷ್ಟಾಚಾರದ ಕೀಳು ರಾಜಕೀಯ ಒಂದು ಕಡೆಯಾದರೆ ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ರಾಜ್ಯ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಮತಾಂಧರಿಂದ ಪೊಲೀಸರ ಮೇಲೆ ಹಲ್ಲೆಗೆ ಸಿಎಂ ಸಿದ್ದರಾಮಯ್ಯ ಕಾರಣ; ಆರ್. ಅಶೋಕ

ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನವೋದ್ಯಮ ಪ್ರಾರಂಭಿಸಬೇಕು ಎಂಬ ಉತ್ಸಾಹದಲ್ಲಿರುವ ಯುವಕ, ಯುವತಿಯರಿಗೆ, ವೃತ್ತಿಪರರಿಗೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಒಂದು ಉತ್ತಮ ಕಲಿಕಾ ಅವಕಾಶವೂ ಹೌದು, ತಮ್ಮ ಕಾರ್ಯ ಕ್ಷೇತ್ರದಲ್ಲಿರುವ ಇತರರನ್ನು ಸಂಪರ್ಕ ಮಾಡಿ ನೆಟ್ವರ್ಕಿಂಗ್ ಮಾಡಿಕೊಳ್ಳುವ ವೇದಿಕೆಯೂ ಹೌದು. ಆದರೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶ ಶುಲ್ಕ ವಿಧಿಸುವ ಮೂಲಕ ಇವರೆಲ್ಲರಿಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಈ ದರಿದ್ರ ಸರ್ಕಾರ ಕಿತ್ತುಕೊಂಡಿದೆ.

ನಮ್ಮ ರಾಜ್ಯದ ಯುವ ಜನಾಂಗಕ್ಕೆ ಈ ಹೂಡಿಕೆದಾರರ ಸಮಾವೇಶದಲ್ಲಿ ಪ್ರವೇಶ ಇಲ್ಲದ ಮೇಲೆ ಈ ಸಮಾವೇಶ ಮಾಡುತ್ತಿರುವುದಾದರೂ ಯಾರಿಗೋಸ್ಕರ? ಮೂರು ದಿನ ಫೋಟೋ ಶೂಟ್ ಮಾಡಿಸಿಕೊಂಡು ಪುಕ್ಕಟೆ ಪ್ರಚಾರ ಪಡೆಯೋದಕ್ಕಾ? ಅಥವಾ ಗ್ಯಾರೆಂಟಿಗಳಿಂದ ದಿವಾಳಿ ಆಗಿರುವ ಸರ್ಕಾರದ ಬೊಕ್ಕಸವನ್ನು ಪ್ರವೇಶ ಶುಲ್ಕ ಮೂಲಕ ವಸೂಲಿ ಮಾಡುವುದಕ್ಕಾ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ