
ಬೆಂಗಳೂರು, (ಜೂನ್. 22): ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅದರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬರೋರಿಗೆ ಕರ್ನಾಟಕ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನ ಕ್ವಾರಂಟೈನ್ ಈಗ ಕಡ್ಡಾಯ ಮಾಡಲಾಗಿದೆ. ಇತ್ತೀಚೆಗೆ ಸರ್ಕಾರ ಈ ಅವಧಿಯನ್ನು ಕಡಿತ ಮಾಡಿತ್ತು. ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕ್ವಾರಂಟೈನ್ ಅವಧಿ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರೋರಿಗೆ ಹೊಸ ರೂಲ್ಸ್
ಇತ್ತೀಚೆಗೆ ಕ್ವಾರಂಟೈನ್ ನಿಯಮ ಸಡಿಲಗೊಳಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ ಹೋಂ ಕ್ವಾರಂಟೈನ್ಗೆ ಸೂಚಿಸಿತ್ತು.
ಇತರ ರಾಜ್ಯದಿಂದ ಬರುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿತ್ತು. ನಂತರದ ಬದಲಾವಣೆಯಲ್ಲಿ ದೆಹಲಿ ಮತ್ತು ಗುಜರಾತ್ ರಾಜ್ಯದಿಂದ ಬಂದವರಿಗೆ 3ದಿನ ಸಾಂಸ್ಥಿಕ ಕ್ವಾರಂಟೈನ್, 11 ದಿನ ಹೋಂ ಕ್ವಾರಂಟೈನ್ ಎಂದು ಹೇಳಲಾಗಿತ್ತು. ಈಗ ಹೊರ ರಾಜ್ಯದಿಂದ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ