ಕುವೆಂಪು ವಿರಚಿತ ನಾಡಗೀತೆ ವಿಚಾರದಲ್ಲಿ ವಿವಾದ ಮೈಮೇಲೆ ಎಳೆದುಕೊಂಡ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವೆಂದು ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದೆ.
ಬೆಂಗಳೂರು (ಫೆ.21): ಕುವೆಂಪು ವಿರಚಿತ ನಾಡಗೀತೆ ವಿಚಾರದಲ್ಲಿ ವಿವಾದ ಮೈಮೇಲೆ ಎಳೆದುಕೊಂಡ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವೆಂದು ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ಅನುದಾನ ರಹಿತ ಹಾಗೂ ಖಾಸಗಿ ಶಾಲೆಗಳಲ್ಲಿ ಹಾಡುವುದು ಕಡ್ಡಾಯವಲ್ಲ ಎಂಬ ಅರ್ಥ ಬರುವಂತೆ ಹೊರಡಿಸಿದ್ದ ಆದೇಶಕ್ಕೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಇನ್ನು ವಿಪಕ್ಷಗಳಿಂದ ಭಾರಿ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ನಾಡಗೀತೆ ಹಾಡುವ ಕುರಿತಾಗಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ತಿದ್ದುಪಡಿ ಆದೇಶವನ್ನು ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ ಕುವೆಂಪು ನಾಡಗೀತೆ ಕಡ್ಡಾಯವಲ್ಲ: ಸರ್ಕಾರದ ಆದೇಶ!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಫೆ.16ರಂದು ಹೊರಡಿಸಿದ್ದ ತಿದ್ದುಪಡಿ ಆದೇಶದಲ್ಲಿ ಎಲ್ಲ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದೈನಂದಿನ ಚಟುವಟಿಕೆ ಆರಂಭವಾಗುವ ಮುನ್ನ ನಾಡಗೀತೆ ಹಾಡುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿತ್ತು. ಅಂದರೆ, ಈ ಆದೇಶದಲ್ಲಿ ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಅರ್ಥ ಬರುವಂತೆ ಆದೇಶವಿತ್ತು. ಸರ್ಕಾರದ ಈ ಆದೇಶಕ್ಕೆ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರದಿಂದ ಕೂಡಲೇ ತಿದ್ದುಪಡಿ ಆದೇಶವನ್ನು ಹೊರಡಿಸಲಾಗಿದೆ.
ಕೆಲವು ಖಾಸಗಿ ಶಾಲೆಗಳಿಗೆ ಬಂತು ಕುತ್ತು: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ಕಡ್ಡಾಯವಾಗಿ ಹಾಡಿಸಲಾಗುತ್ತಿರಲಿಲ್ಲ. ಕೇವಲ ರಾಷ್ಟ್ರಗೀತೆಯನ್ನು ಹಾಡಿಸಲಾಗುತ್ತಿತ್ತು. ಆದರೆ, ಸರ್ಕಾರ ಹೊರಡಿಸಿದ ತಿದ್ದುಪಡಿ ಆದೇಶದಲ್ಲಿ ರಾಜ್ಯ ಎಲ್ಲ ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿಯೂ ದೈನಂದಿನ ಚಟುವಟಿಕೆ ಆರಂಭವಾಗುವ ಮುನ್ನ ಪ್ರಾರ್ಥನಾ ವೇಳೆಯಲ್ಲಿ ಕಡ್ಡಾಯವಾಗಿ ನಾಡಗೀತೆ ಹಾಡಿಸಬೇಕು ಎಂದು ತಿದ್ದುಪಡಿ ಆದೇಶವನ್ನು ಹೊರಡಿಸಲಾಗಿದೆ. ಈ ಮೂಲಕ ಎಲ್ಲ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ ಹಾಡಿಸುವುದು ಕಡ್ಡಾಯವಾಗಲಿದೆ.
ನಾಡಗೀತೆಯಲ್ಲೂ ವಿವಾದ ಎಳೆದುಕೊಂಡ ಸರ್ಕಾರ: ಬೆಂಗಳೂರು (ಫೆ.21): ಶಾಲೆಗಳಲ್ಲಿ ಧಾರ್ಮಿಕ ಹಬ್ಬ ಆಚರಣೆ ನಿಷೇಧ, ಘೋಷವಾಕ್ಯ ಬದಲಾವಣೆ, ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳ ವ್ಯಕ್ತಿಗೆ ರಾಜ್ಯದ ಪರಿಹಾರದ ವಿವಾದದ ಬಳಿಕ ರಾಜ್ಯ ಸರ್ಕಾರ ಮತ್ತೊಂದುಉ ಯಡವಟ್ಟು ಮಾಡಿಕೊಂಡಿದೆ. ಖಾಸಗಿ ಶಾಲೆಗಳಲ್ಲಿ ಕುವೆಂಪು ಅವರು ರಚಿಸಿರುವ ನಾಡಗೀತೆ ಕಡ್ಡಾಯವಲ್ಲ ಎನ್ನುವ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದ ಈ ಆದೇಶ ಹೊರಡಿಸಲಾಗಿದೆ. ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಾಗಿರಲಿದೆ ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ. ಆ ಮೂಲಕ ರಾಜ್ಯ ಸರ್ಕಾರ ತನ್ನ ದಿನಕ್ಕೊಂದು ವಿವಾದದ ಅಡಿಯಲ್ಲಿ ಮತ್ತೊಂದು ಹೊಸ ವಿವಾದ ಸೃಷ್ಟಿಸಿದೆ. ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದ್ದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಡಿಕೆಶಿ ಗಡ್ಡದ ಮೇಲೆ ಅಶೋಕ್ ಕಣ್ಣು , ಕೃಷ್ಣ ಬೈರೇಗೌಡ ಉತ್ತರಕ್ಕೆ ನಗೆಗಡಲಲ್ಲಿ ತೇಲಿದ ಸದನ
ಖಾಸಗಿ ಶಾಲೆಗಳಳಲ್ಲಿ ನಾಡಗೀತೆಗೆ ವಿನಾಯಿತಿ ನೀಡಿರುವ ಸರ್ಕಾರ, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರನೇ ನಾಡಗೀತೆ ಹಾಡಬೇಕು ಎಂದು ವಿವಾದಿತ ಆದೇಶವನ್ನು ಹೊರಡಿಸಿದೆ. ಇದಕ್ಕೂ ಮುನ್ನ ಎಲ್ಲಾ ಶಾಲೆಗಳಲ್ಲಿ ದಿನದ ಚಟುವಟಿಕೆ ಆರಂಭಕ್ಕೂ ಮುನ್ನ ನಾಡಗೀತೆ ಹಾಡಬೇಕಿತ್ತು. ಕೆಲ ಸರ್ಕಾರಿ ಇಲಾಖೆ, ಕಚೇರಿ, ಸರ್ಕಾರದ ಅಧಿಕೃತ ಕಾರ್ಯಕ್ರಮ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಯೊಂದಿಗೆ ನಾಡಗೀತೆ ಕೂಡ ಹಾಡಬೇಕು ಎನ್ನುವ ಆದೇಶ ನೀಡಲಾಗಿತ್ತು. ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.