ರಾಜ್ಯದ ದೇಗುಲಗಳ ಪ್ರಸಾದಕ್ಕೆ ನಂದಿನಿ ತುಪ್ಪ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

By Sathish Kumar KH  |  First Published Sep 20, 2024, 5:15 PM IST

ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಯಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಬೆಂಗಳೂರು (ಸೆ.20): ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಪತ್ತೆಯಾದ ಬೆನ್ನಲ್ಲಿಯೇ ಇತರೆ ಖಾಸಗಿ ಕಂಪನಿಗಳ ಕಡಿಮೆ ದರದ ತುಪ್ಪಗಳನ್ನು ಬಳಸದಂತೆ ನಿಗಾವಹಿಸಲು ಮುಂದಾಗಿದೆ.

ತಿರುಪತಿ ದೇವಸ್ಥಾನದ ಲಡ್ಡುನಲ್ಲಿ ದನದ ಕೊಬ್ಬು, ಹಂದಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವ ವರದಿ ಬಹಿರಂಗಗೊಂಡ ಬೆನ್ನಲ್ಲಿಯೇ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪೂಜೆ ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ಹಾಗೂ ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಸೂಚಿಸಿದೆ.

Tap to resize

Latest Videos

undefined

ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬಿಗೂ, ಕೆಎಂಫ್‌ನ ನಂದಿನಿ ತುಪ್ಪಕ್ಕೂ ಸಂಬಂಧವೇ ಇಲ್ಲ!

 

click me!