ಗ್ರಾಮೀಣ ಭಾಗದ ಜನರಿಗೆ ಸಿಹಿ ಸುದ್ದಿ, ವಾಸ ಸ್ಥಳ ಪ್ರಮಾಣ ಪತ್ರ ಪಡೆಯೋದು ಇನ್ನು ಸುಲಭ! ರಾಜ್ಯ ಸರ್ಕಾರ ಮಹತ್ವದ ಆದೇಶ

Kannadaprabha News   | Kannada Prabha
Published : Jun 21, 2026, 05:32 AM IST
karnataka gover order on Residence confirmation letter

ಸಾರಾಂಶ

ಗ್ರಾಮೀಣ ಭಾಗದ ಜನರು ಇನ್ನು ವಾಸ ಸ್ಥಳ ಪ್ರಮಾಣ ಪತ್ರಕ್ಕಾಗಿ ಪಟ್ಟಣಕ್ಕೆ ಅಲೆದಾಡಬೇಕಿಲ್ಲ. ಊರಿನ ಗ್ರಾಮಪಂಚಾಯ್ತಿಗಳಲ್ಲೇ ದೃಢೀಕರಣ ಪತ್ರ ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಪಿಡಿಓಗಳಿಗೆ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚಿನ ವಿವರಗಳಿಗೆ ಪೂರ್ತಿ ಓದಿ.

ಬೆಂಗಳೂರು (ಜೂ.21):  ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಗ್ರಾಮ ಪಂಚಾಯತಿಗಳಲ್ಲೇ ‘ವಾಸ ಸ್ಥಳ ದೃಢೀಕರಣ ಪತ್ರ’(Residence confirmation letter) ನೀಡುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO)ಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿಯು ತಮ್ಮ ಗ್ರಾಪಂ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಒಂದು ಬಾರಿಗೆ ಅಭಿಯಾನ ಮಾದರಿಯಲ್ಲಿ ವಾಸ ಸ್ಥಳ ಪ್ರಮಾಣ ಪತ್ರ ನೀಡಬೇಕು. ಇದಕ್ಕಾಗಿ ಪ್ರಸ್ತುತ ಅಟಲ್ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿ ಲಭ್ಯವಿರುವ ಸೇವೆಯನ್ನು ಬಳಸಿಕೊಳ್ಳಬೇಕು. ವಾಸ ಸ್ಥಳ ಪ್ರಮಾಣ ಪತ್ರ ನೀಡಲು ಯಾವುದೇ ಸೇವಾ ಶುಲ್ಕವನ್ನು ವಿಧಿಸುವಂತಿಲ್ಲ. ವಾಸ ಸ್ಥಳ ದೃಢೀಕರಣ ಪತ್ರ ನೀಡಲು ಅಗತ್ಯವಿರುವ ದಾಖಲೆಗಳು ಮತ್ತು ಕಾರ್ಯವಿಧಾನದ ಕುರಿತು ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ವೇಳೆ ಗ್ರಾಮೀಣ ಭಾಗದ ಜನರಿಗೆ ವಾಸಸ್ಥಳದ ದಾಖಲೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ತೀರ್ಮಾನ ಮಾಡಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

RSS Registration row: ನನ್ನ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದ್ರೆ ಆರೆಸೆಸ್ಸ್ ಕಚೇರಿಗೆ ಹೋಗಿ ಕ್ಷಮೆ ಕೇಳಲು ಸಿದ್ಧ: ಪ್ರಿಯಾಂಕ್ ಖರ್ಗೆ
ಬೆಂಗಳೂರಲ್ಲಿ ಇಡಿ ಭಾರಿ ಬೇಟೆ: ಡಿಜಿಟಲ್ ಮೂಲಕ ಅಕ್ರಮ ಹಣ ವರ್ಗಾವಣೆ, 5 ಪ್ರತಿಷ್ಠಿತ ಕಂಪನಿಗಳ 6 ಕೋಟಿ ರೂ. ಜಪ್ತಿ!