
ಬೆಂಗಳೂರು, (ಏ.22): ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು (ಗುರುವಾರ) ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಇದರೊಂದಿಗೆ ಅರ್ಧ ಕರ್ನಾಟಕ ಲಾಕ್ ಆದಂತೆ.
ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.
ಕೊರೋನಾ ರಿಪೋರ್ಟ್ ಮಾರಾಟ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗೆ ಸುಧಾಕರ್ ಪ್ರತಿಕ್ರಿಯೆ
ಏಪ್ರಿಲ್-21 ರಿಂದ ಮೇ-4ರ ವರೆಗೆ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅನುಮತಿಸಲಾದ ಹಾಗೂ ನಿರ್ಭಂಧಿಸಲಾದ ಚಟುವಟಿಕೆಗಳು ಈ ಕೆಳಗಿನಂತಿವೆ.
ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.
ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಖಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.
ಇನ್ನು ಪ್ರಮುಖವಾಗಿ ಪೊಲೀಸರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಏಕಾಏಕಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಇದರಿಂದ ಗೊಂದಲ ಸೃಷ್ಟಿಸಿದೆ. ಸರ್ಕಾರ ಹೀಗೆ ಮಾಡುತ್ತಿರುವುದ್ಯಾಕೆ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ