
ಬೆಂಗಳೂರು (ಜು.18): ಬಜೆಟ್‌ನಲ್ಲಿ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಿ, ನಿಗಮದ ಚಟುವಟಿಕೆಗಾಗಿ 500 ಕೋಟಿ ರು. ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಾರ್ಚ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ್ದ ಬಜೆಟ್‌ನಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರು. ಮೀಸಲಿಡುವುದಾಗಿ ಘೋಷಿಸಿದ್ದರು.
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಇದರಂತೆ, ಒಕ್ಕಲಿಗ ಸಮುದಾಯಗಳಾದ ಪ್ರವರ್ಗ 3 ‘ಎ’ ವರ್ಗದಲ್ಲಿ ನಮೂದಿಸಲಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಅಭಿವೃದ್ಧಿಗಾಗಿ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಲಾಗಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013 ರಡಿಯಲ್ಲಿ ನೋಂದಾಯಿಸಿ ಸ್ಥಾಪಿಸುವುದು. ಹಾಗೂ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ