
ಬೆಂಗಳೂರು (ಮೇ.28): ಕೋವಿಡ್ ಮಿನಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 16,095 ಜನ ಕಲಾವಿದರಿಗೆ ತಲಾ ಮೂರು ಸಾವಿರ ರು.ನಂತೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ 4.82 ರು. ಅನುದಾನ ಮಂಜೂರು ಮಾಡಿದೆ.
ಕಲಾವಿದರಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಅದರಂತೆ ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಪರಿಹಾರ ನೀಡಲು ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿ 4.82 ಕೋಟಿ ರು.ಗಳಿಗೆ ಷರತ್ತು ಬದ್ಧ ಮಂಜೂರಾತಿ ನೀಡಿದೆ. ಇಲಾಖೆಯು ಈ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಬೇಕು. ಪರಿಹಾರ ಮೊತ್ತವನ್ನು ಫಲಾನುಭವಿಗಳ ಕಾತೆಗೆ ನೇರವಾಗಿ ವರ್ಗಾಯಿಸಬೇಕು. ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ಮಾಸಾಶನ ಪಡೆದಿರುವರೇ ಇಲ್ಲವೇ ಎಂದು ಪರಿಶೀಲಿಸಿಕೊಂಡು ಮಾರ್ಗಸೂಚಿಯನುಸಾರ ನೆರವು ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೋವಿಡ್ ಪ್ಯಾಕೇಜ್: ಅರ್ಜಿ ಸಲ್ಲಿಕೆಗೆ ಚಾಲನೆ, ಈ ದಾಖಲೆಗಳು ಅತ್ಯವಶ್ಯಕ .
ಈ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು, ಪರಿಹಾರಕ್ಕೆ ಕಲಾವಿದರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪ್ರತಿ ಜಿಲ್ಲೆಯಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಒಳಗೊಂಡ ಐದು ಜನರ ಸಮಿತಿಯು ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಬೇಕು. 15 ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಮಿಕರಿಗೂ ನೆರವು ಬಿಡುಗಡೆ
ಕೋವಿಡ್ ಮಿನಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿರುವ ವಿವಿಧ ವರ್ಗಗಳಿಗೆ 1250 ಕೋಟಿ ರು. ಆರ್ಥಿಕ ಪ್ಯಾಕೇಜ್ ಘೋಷಿಸಿದ್ದ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ 749 ಕೋಟಿ ರು. ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಪ್ರತಿ ಕಾರ್ಮಿಕನಿಗೆ 3000 ರು. ನೆರವು ನೀಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ