
ಬೆಂಗಳೂರು, (ಏ.27): ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಯಾಗಿರುವ ಕಾರಣ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆಗೊಳಿಸಿದೆ.
ಮದ್ಯದಂಗಡಿಯಲ್ಲಿ ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶವಿದ್ದು, ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಅವಕಾಶ ನೀಡಲಾಗಿದೆ. ಸೀಲ್ಡ್ ಬಾಟಲ್‌ಗಳಲ್ಲಿ =ಮಾತ್ರ ಮದ್ಯ ಪಾರ್ಸೆಲ್ ನೀಡಬೇಕು. ಎಂಆರ್‌ಪಿ ದರದಲ್ಲಿ ಮಾತ್ರ ಮದ್ಯ ಮಾರಾಟ ಮಾಡಬೇಕು. ಗರಿಷ್ಟ 2 ಲೀಟರ್ ಬಿಯರ್ ಮಾತ್ರ ಪಾರ್ಸೆಲ್ ನೀಡಬೇಕು. ಅದರಲ್ಲೂ ಬಾಟಲ್ ಬಿಯರ್‌ಗಳನ್ನು ಮಾತ್ರ ಮಾರಾಟ ಮಾಡಬಹುದು. ಆದರೆ ದೊಡ್ಡ ಕಂಟೇನರ್‌ಗಳನ್ನು ಮಾರಾಟ ಮಾಡುವಂತಿಲ್ಲ ಎಂಬ ನಿಯಮವನ್ನು ಸರ್ಕಾರ ರೂಪಿಸಿದೆ.
ಲಾಕ್ ಡೌನ್ ಭಯಕ್ಕೆ ಬೆದರಿದ ಮದ್ಯಪ್ರಿಯರು.. ಅಂಗಡಿ ಮುಂದೆ ಸಾಲೋ ಸಾಲು
ಮಾಲ್, ಸೂಪರ್ ಮಾರ್ಕೆಟ್‌ಗಳಲ್ಲಿ ಮದ್ಯ ಮಾರುವಂತಿಲ್ಲ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ. ಮೇ 12ರವರೆಗೆ ಈ ಮಾರ್ಗಸೂಚಿಯ ಅನ್ವಯ ಮದ್ಯ ಮಾರಾಟ ಮಾಡಬಹುದಾಗಿದೆ. ಮದ್ಯ ಮಾರಾಟ ವೇಳೆ ಕೊವಿಡ್ ನಿಯಮ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಲೈಸೆನ್ಸ್ ಅಮಾನತು, ರದ್ದು ಮಾಡುವ ಎಚ್ಚರಿಕೆಯನ್ನು ಮಾರ್ಗದರ್ಶಿ ಸೂತ್ರದಲ್ಲಿ ವಿಧಿಸಲಾಗಿದೆ.
ಕೊರೊನಾ ಮೊದಲನೆ ಅಲೆ ಕಾಣಿಸಿಕೊಂಡಾಗ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದರು.ಮದ್ಯಪ್ರಿಯರು ಆಲ್ಕೋಹಾಲ್ಗಾಗಿ ತುಂಬಾನೇ ಪರದಾಡಿದ್ರು, ಅಲ್ಲದೇ ಕೆಲವರು ಆತ್ಮಹತ್ಯೆಯನ್ನು ಸಹ ಮಾಡಿಕೊಂಡರು. ಇನ್ನೂ ಕೆಲರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುತ್ತದೆ ಎಂದು ಅನೇಕರು ಅದನ್ನೇ ಕುಡಿದಿರುವ ಉದಾಹರಣೆಗಳಿವೆ.
ಆದರೆ, ಈ ಬಾರಿ ಹೀಗೆ ಆಗದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ. ಹೀಗಾಗಿ 14 ದಿನಗಳ ಕೊವಿಡ್ ಕರ್ಫ್ಯೂನಲ್ಲಿ ಪಾರ್ಸೆಲ್‌ಗೆ ಅವಕಾಶ ಮಾಡಿಕೊಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ