ಬಕ್ರೀದ್ ಹಬ್ಬ ಹೇಗೆ ಆಚರಿಸ್ಬೇಕು? ಮಾರ್ಗಸೂಚಿ ಹೊರಡಿಸಿದ ಸರ್ಕಾರ

By Suvarna NewsFirst Published Jul 25, 2020, 2:18 PM IST
Highlights

ಕೊರೋನಾ ಮಾಹಾಮಾರಿಯಿಂದಾಗಿ ಈಗ ಹಬ್ಬ ಹರಿದಿನಗಳಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಬಕ್ರೀದ್ ಹಬ್ಬ ಆಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಬೆಂಗಳೂರು, (ಜುಲೈ.25): ಕೊರೋನಾ ಹಾವಳಿ ಹಿನ್ನೆಲೆಯಲ್ಲಿ ಹಬ್ಬಗಳಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರ ಈ ವರ್ಷ ಹಬ್ಬಗಳ ಆಚರಣೆಯಲ್ಲಿ ಕೆಲವೊಂದಿಷ್ಟು ಮಾರ್ಪಾಡುಗಳನ್ನು ಮಾಡಲು ಮಂದಾಗಿದೆ. 

ಸಾರ್ವಜನಿಕವಾಗಿ ಆಚರಿಸಲ್ಪಡುವ ಹಬ್ಬಗಳಿಗೆ ರಾಜ್ಯ ಸರ್ಕಾರ ಕಡಿವಾಣ ..?

ಅದರಂತೆ ಇದೀಗ ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀಸ್ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದೆ. ಇದೇ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಿಸುವುದಾಗಿ ಹಿಲಾಲ್ ಸಮಿತಿ ಘೋಷಿಸಿದೆ. ಈ ಹಿನ್ನೆಯಲ್ಲಿ ಹಬ್ಬವನ್ನು ಹೇಗೆ ಆಚರಿಸಬೇಕೆಂಬ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದ್ದು, ಅದು ಈ ಕೆಳಗಿನಂತಿದೆ.

ಮಾರ್ಗಸೂಚಿ ಇಂತಿದೆ
* ಈದ್ಗಾಹ್‌ಗಳಲ್ಲಿ ಸಾಮೂಕಿ ಪ್ರಾರ್ಥನೆ ನಿರ್ಬಂಧ
* ಮಸೀದಿಗಳಲ್ಲಿ ಗರಿಷ್ಠ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸುವುದು.
*5 ಹೊತ್ತಿನ ನಮಾಜ್ ನಿರ್ಬಂಧ
* 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು.
* ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
* ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್‌ನಿಂದ ಶುಚಿಗೊಳಿಸುವುದು.
* ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಂಟ್ಟುವಂತಿಲ್ಲ.
* ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರುವುದು.
* ಮಸೀದಿ ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿ ಸಾಮೂಕ ಪ್ರಾರ್ಥನೆ ಆಯೋಜಿಸುವಂತಿಲ್ಲ.

click me!