
ಬೆಂಗಳೂರು, (ಆ.14): ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ
ಸಾರ್ವಜನಿಕ ಗಣೇಶೋತ್ಸವ ನಡೆಸುವಂತಿಲ್ಲ. ಯಾವುದೇ ಧಾರ್ಮಿಕ ಆಚರಣೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಈ ಹಿನ್ನಲೆಯಲ್ಲಿ ಇತ್ತ ರಾಜ್ಯ ಸರ್ಕಾರವು ಸಹ ಕೇಂದ್ರದ ಮಾರ್ಗಸೂಚಿ ಪಾಲಿಸುವಂತೆ ಆದೇಶ ಹೊರಡಿಸಿದೆ.
ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಿಸಬೇಕು. ರಸ್ತೆ, ಗಲ್ಲಿ, ಓಣಿ, ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ಉಲ್ಲೇಖವಾಗಿದೆ.
ಸಾರ್ವಜನಿಕವಾಗಿ ಆಚರಿಸಲ್ಪಡುವ ಹಬ್ಬಗಳಿಗೆ ರಾಜ್ಯ ಸರ್ಕಾರ ಕಡಿವಾಣ
ಮನೆ ಮತ್ತು ದೇವಸ್ಥಾನಗಳಲ್ಲಿ ಸರಳವಾಗಿ ಗಣೇಶನನ್ನು ಪೂಜಿಸಲು ಅಡ್ಡಿ ಇಲ್ಲ. ಆದ್ರೆ, ದೇವಸ್ಥಾನಗಳಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಗಣೇಶ ವಿಸರ್ಜನೆಗಳನ್ನು ಮನೆಯ ಆವರಣದಲ್ಲೇ ನೆರವೇರಿಸುವುದು ಕಡ್ಡಾಯ. ಆಯಾ ಜಿಲ್ಲಾಡಳಿತ, ಸ್ಥಳೀಯ ಆಡಳಿತಗಳು ನೀಡುವ ಆದೇಶಗಳನ್ನು ಪಾಲಿಸಬೇಕು ಎಂದು ಸರ್ಕಾರದ ಗೈಡ್ ಲೈನ್ಸ್ ಹೊರಡಿಸಿದೆ.
ಗೈಡ್ ಲೈನ್ಸ್ ಇಂತಿದೆ
* ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು
* ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ಉದಾ-ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಳಲ್ಲಿ ಪ್ರತಿಷ್ಠಾಪಿಸಬಾರದು
* ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡತಕ್ಕದ್ದಲ್ಲ
* ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ, ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
* ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು.
* ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ವಿಪತ್ತಯ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ
ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಈ ವರ್ಷ ಹಬ್ಬಗಳ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ