
ಬೆಂಗಳೂರು, (ಆ.08): ಮಳೆಯಿಂದಾಗಿ ಮನೆಯಲ್ಲಿನ ಬಟ್ಟೆ, ದಿನಬಳಕೆ, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದಲ್ಲಿ ಕೇಂದ್ರದ ಮಾರ್ಗಸೂಚಿಯ ಜತೆಗೆ ರಾಜ್ಯ ಸರ್ಕಾರವೂ ಸಹ ಹೆಚ್ಚಿನ ಪರಿಹಾರ ನೀಡಲಿದೆ ಎಂದು ತಿಳಿಸಿದೆ.
ಶೇ. 75 ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ ಪರಿಷ್ಕೃತ ಮಾರ್ಗಸೂಚಿಯಂತೆ 5 ಲಕ್ಷ ರೂಪಾಯಿ, ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ, ವಾಸಿಸಲು ಯೋಗ್ಯವಿಲ್ಲದೆ ಪುನರ್ ನಿರ್ಮಾಣ ಮಾಡಲೇಬೇಕಾದ ಮನೆಗಳಿಗೂ ಸಹ 5 ಲಕ್ಷ ರೂಪಾಯಿ.
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು
ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ ದುರಸ್ತಿ ಮಾಡಲು ಸಾಧ್ಯವಿರುವಂತಹ ಮನೆಗಳಿಗೆ 3 ಲಕ್ಷ ರೂಪಾಯಿ, ಶೇ.15 ರಿಂದ 25 ರಷ್ಟು ಅಲ್ಪ-ಸ್ವಲ್ಪ ಹಾನಿಗೀಡಾದ ಮನೆಗಳಿಗೆ 50 ಸಾವಿರ ರೂಪಾಯಿ ನೆರವು ನೀಡುವುದಾಗಿ ಪ್ರಕಟಿಸಿದೆ.
ಇದಲ್ಲದೆ, ದಿನಬಳಕೆ ವಸ್ತುಗಳನ್ನು ಕಳೆದುಕೊಂಡವರಿಗೆ ತಕ್ಷಣಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯಿಂದ 10 ಸಾವಿರ ರೂಪಾಯಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ.
ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಭಿವೃದ್ಧಿಪಡಿಸಲಾದ ತಂತ್ರಾಂಶದ ಮೂಲಕ ಹೊಸ ಮನೆ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ