ಅಧಿಕಾರಿಗಳಿಗೆ ಕೆಲ ನಿರ್ಬಂಧ ಹೇರಿದ ರಾಜ್ಯ ಸರ್ಕಾರ, ಜತೆಗೆ ಎಚ್ಚರಿಕೆ ಸಂದೇಶ

By Suvarna NewsFirst Published Sep 18, 2021, 10:46 PM IST
Highlights

* ಅಧಿಕಾರಿಗಳ ಪತ್ರಿಕಾಗೋಷ್ಠಿಗೆ ಬ್ರೇಕ್ ಹಾಕಿದ ಸರ್ಕಾರ
* ಅಧಿಕೃತ ಹೇಳಿಕೆ ಹೊರತುಪಡಿಸಿ ಬೇರೆ ಯಾವುದೇ ಪತ್ರಿಕಾಗೋಷ್ಠಿ ಮಾಡುವಂತಿಲ್ಲ
* ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು, (ಸೆ.18): ಅಧಿಕಾರಿಗಳ ಪತ್ರಿಕಾಗೋಷ್ಠಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.  

ಸರ್ಕಾರಿ ಅಧಿಕಾರಿಗಳು ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಇಂದು (ಸೆ.18) ಸುತ್ತೋಲೆ ಹೊರಡಿಸಿದ್ದಾರೆ.

ರಾಜೀನಾಮೆ ನೀಡಿದ ಸಿಎಂ ಅಮರಿಂದರ್, BSYಗೆ ವರಿಷ್ಠರಿಂದ ಫುಲ್ ಪವರ್: ಸೆ.18ರ ಟಾಪ್ 10 ಸುದ್ದಿ!

ಸರ್ಕಾರಿ ಯೋಜನೆ ಪ್ರಚಾರಕ್ಕೆ ಮಾತ್ರ ಮಾಧ್ಯಮಗಳನ್ನು ಬಳಸಬೇಕು. ಕುಂದು ಕೊರತೆ ವ್ಯಕ್ತಪಡಿಸಲು ಮಾಧ್ಯಮಗಳನ್ನು ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಇಲಾಖೆಯ ಸಾಧನೆಗಳ ಬಗ್ಗೆ, ಅಥವಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪ್ರಸಾರ ಮಾಡಬೇಕಾದ ಸಂದರ್ಭದಲ್ಲಿ ಅಧಿಕಾರಿಗಳು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸದೇ ಸರ್ಕಾರದ ಆಡಳಿತ ಹೆಸರಿನಲ್ಲಿ ತೆರೆಯಲಾದ ಖಾತೆಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ನಿಯಮ 26: ಸರ್ಕಾರಿ ನೌಕರರ ಕೃತ್ಯಗಳು ಮತ್ತು ನಡತೆಯ ಪ್ರಕಾರ ನಿಯಮಿಸಲಾದ ಪ್ರಾಧಿಕಾರದ ಪೂರ್ವಾನುಮೋದನೆ ಪಡೆಯದ ಹೊರತು ಯಾವುದೇ ಸರ್ಕಾರಿ ನೌಕರನು ಸರ್ಕಾರದ ಯಾವ ಅಧಿಕೃತ ಕೃತ್ಯವು ಪ್ರತಿಕೂಲ ಟೀಕೆಯ ಅಥವಾ ಮಾನಹಾನಿ ಸ್ವರೂಪದ ನಿಂದನೆಯ ವಸ್ತು ವಿಷಯವಾಗಿರುವುದೋ ಆ ಯಾವುದೇ ಅಧಿಕೃತ ಕಡತದ ಸಮರ್ಥನೆಗಾಗಿ ಯಾವುದೇ ನ್ಯಾಯಾಲಯಕ್ಕೆ ಅಥವಾ ಪತ್ರಿಕೆಗೆ ಮೊರೆ ಹೋಗತಕ್ಕದಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮೇಲಿನ ನಿಯಮಗಳಲ್ಲಿನ ಅವಕಾಶಗಳಿಗೆ ವ್ಯತಿರಿಕ್ತವಾಗಿ ಯಾವುದೇ ಅಧಿಕಾರಿ ಸರ್ಕಾರದ ಕಾರ್ಯನೀತಿಗೆ ವ್ಯತಿರಿಕ್ತವಾಗಿ ಅನಪೇಕ್ಷಿತ ವೇದಿಕೆಗಳಲ್ಲಿ ತಮ್ಮದೇ ಆದ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಜರುಗಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

click me!