ಕರ್ನಾಟಕದಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಸರ್ಕಾರಕ್ಕೆ ಸಲಹೆ ಕೊಟ್ಟ ಕೇಂದ್ರ ಸಚಿವ

By Suvarna News  |  First Published May 17, 2021, 9:48 PM IST

* ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಕೇಂದ್ರ ಸಚಿವರು 
* ಹುಬ್ಬಳ್ಳಿಯಲ್ಲಿ ಕೇಂದ್ರ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಮಾತು
*  ಲಾಕ್‌ಡೌನ್ ಮುಂದುವರಿಸುವ ಕುರಿತು ಸೂಕ್ತ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದ  ಪ್ರಲ್ಹಾದ್ ಜೋಶಿ 
 


ಹುಬ್ಬಳ್ಳಿ, (ಮೇ.17): ಕರ್ನಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೆನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಕೇಂದ್ರ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಜಿಟೋ (ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್) ವತಿಯಿಂದ ನಿರ್ಮಿಸಲಾದ ಆಕ್ಸಿಜನ್‌ ಆನ್ ವೀಲ್ಸ್ ವಾಹನವನ್ನು ಕಿಮ್ಸ್‌ಗೆ ಹಸ್ತಾಂತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Tap to resize

Latest Videos

 ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆಸುವ ಕುರಿತು ತಜ್ಞರು ನೀಡಿದ ವರದಿಯನ್ನು ನಾನು ಪರಿಶೀಲಿಸಿಲ್ಲ. ಸದ್ಯ ಮೇ 24 ವರೆಗೆ ಕಠಿಣ ಲಾಕ್‌ಡೌನ್ ಜಾರಿಯಲ್ಲಿದೆ. ಮೇ 22 ನಂತರ ಪರಿಸ್ಥಿತಿಯನ್ನು ನೋಡಿಕೊಂಡು ಲಾಕ್‌ಡೌನ್ ಮುಂದುವರಿಸುವ ಕುರಿತು ಸೂಕ್ತ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂಬುದು ನನ್ನ ಸಲಹೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಫಿಕ್ಸ್: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಸಿಗುತ್ತಾ ಗುಡ್‌ನ್ಯೂಸ್?

ಸೋಂಕು ಹಬ್ಬುವುದನ್ನು ತಡೆಯಲು ಕಠಿಣ ಲಾಕ್‌ಡೌನ್ ಮುಂದುವರಿಸಲಾಗುವುದು. ಲಾಕ್ ಡೌನ್ ಪರಿಣಾಮದಿಂದ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ಇಳಿಮುಖವಾಗಲು ಸಮಯಬೇಕು. ಬ್ಲಾಕ್ ಫಂಗಸ್ ತೀವ್ರತರನಾಗಿ ಕೋವಿಡ್‌ನಿಂದ ಬಳಲುವವರಿಗೆ ನೀಡುವ ಚಿಕಿತ್ಸೆಯ ಅಡ್ಡಪರಿಣಾಮದಿಂದ ಹೆಚ್ಚಾಗುತ್ತಿದೆ. ಈ ಕುರಿತು ತಜ್ಞ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ ಎಂದರು.

 ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ ಹಾಗೂ ಚಿಕಿತ್ಸೆಗೆ ಅಗತ್ಯ ಇರುವ ಔಷಧಗಳನ್ನು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಒದಗಿಸುವಂತೆ ಕೇಂದ್ರ ಸರ್ಕಾರದ ಆರೋಗ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದೇನೆ. ರಾಜ್ಯದ ಆರೋಗ್ಯ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಟೆಂಡರ್ ಮೂಲಕ ಅಗತ್ಯ ಇರುವ ಔಷಧಗಳನ್ನು ಖರೀದಿಸುವಂತೆ ತಿಳಿಸಿದ್ದೇನೆ. ದೇಶದಲ್ಲಿ ಕೋವಿಡ್ ಪಾಸಿಟಿವ್ ಬಂದವರ ಸಂಖ್ಯೆ ಹೆಚ್ಚಿದ್ದರೂ, ಶೇಕಡವಾರು ಮರಣ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿದರು.

click me!