ಅದಾನಿ ಡೇಟಾ ಸೆಂಟರ್‌ ಸೇರಿದಂತೆ 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಸರ್ಕಾರ ಒಡಂಬಡಿಕೆ

By Suvarna NewsFirst Published Jul 15, 2021, 11:13 PM IST
Highlights

* ಕೊರೋನಾ ಎರಡನೇ ಅಲೆ ಬಳಿಕ ಕರ್ನಾಟಕದ ಕಿಕ್ ಸ್ಟಾರ್ಟ್
* 28,000 ಕೋಟಿ ರೂ. ಮೊತ್ತದ ಹೂಡಿಕೆಗೆ ಒಡಂಬಡಿಕೆ
* ಅದಾನಿ ಡೇಟಾ ಸೆಂಟರ್, ಸಿ4ವಿ ಘಟಕ, 23 ಕಂಪನಿ ಜತೆ ಒಪ್ಪಂದ

ಬೆಂಗಳೂರು, (ಜು.15): ಕೊರೋನಾ ಎರಡನೇ ಅಲೆ ಬಳಿಕ ಸಾಮಾನ್ಯ ಜನರ ಆತಂಕ ನಡುವೆ ಉದ್ಯಮ ವಲಯದಲ್ಲಿ ಹೂಡಿಕೆಗೆ ರಾಜ್ಯ ಸರ್ಕಾರ ಆಸಕ್ತಿ ತೋರಿಸಿದೆ.

ಹೌದು.. ಇಲೆಕ್ಟ್ರಿಕ್‌ ವಾಹನ, ಅದಾನಿ ಡೇಟಾ ಸೇಂಟರ್‌, ಏರೋಸ್ಪೇಸ್‌ ಹಾಗೂ ರಕ್ಷಣಾ ಕಂಪನಿಗಳು ಸೇರಿದಂತೆ 23 ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 28,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಕ್ಕೆ ರಾಜ್ಯ ಸರ್ಕಾರ ಇಂದು (ಗುರುವಾರ) ಸಹಿ ಹಾಕಿದೆ.

ಇನ್ವೆಸ್ಟ್‌ ಕರ್ನಾಟಕ ವೇದಿಕೆಯ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಕಾಲಮಿತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೆರಿಕದ ಸಿ4ವಿ  ರಾಜ್ಯದಲ್ಲಿ 4015 ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿದೆ. 

ಸಿಂಗಾಪುರ ಮೂಲದ ಎಲ್‌ಎನ್‌ಜಿ ಟರ್ಮಿನಲ್ ಆಪರೇಟರ್ ಎಲ್‌ಎನ್‌ಜಿ ಅಲೈಯನ್ಸ್‌ನೊಂದಿಗೆ 2250 ಕೋಟಿ ರೂ., ಅದಾನಿ ಡೇಟಾ ಸೆಂಟರ್‌ ಸ್ಥಾಪನೆಗೆ 5000 ಕೋಟಿ ರೂ. ಒಪ್ಪಂದ ಆಗಿದೆ.

ಕೊರೋನಾ ಸಂಕಷ್ಟದ ನಡುವೆಯೂ ಹೂಡಿಕೆ ಪ್ರಸ್ತಾವನೆಗಳು ಹಾಗೂ ಒಪ್ಪಂದಗಳ ಮೂಲಕ ಕರ್ನಾಟಕಕ್ಕೆ 28,000 ಕೋಟಿ ರೂ. ಹೂಡಿಕೆ ಹರಿದು ಬರಲಿದೆ.

ಕೊರೋನಾ ಸಂಕಷ್ಟದ ನಡುವೆಯೂ ಕಳೆದ ವರ್ಷದ ಮಾರ್ಚ್‌ನಿಂದ ಕರ್ನಾಟಕ ಸರ್ಕಾರ 77,000 ಕೋಟಿ ರೂ. ಹೂಡಿಕೆಯ 520ಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದಲ್ಲದೇ, ಹೆಚ್ಚುವರಿ ಪ್ರಸ್ತಾವನೆಗಳು ಹಾಗೂ 23,000 ಕೋಟಿ ರೂ. ಮೊತ್ತದ ಒಪ್ಪಂದವೂ ಸೇರಿ ಒಟ್ಟು 1 ಲಕ್ಷ ಕೋಟಿ ರೂ. ಹೂಡಿಕೆ ಆಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
 

click me!