ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ

By Kannadaprabha NewsFirst Published May 11, 2021, 9:04 AM IST
Highlights
  • ಖಾಸಗಿ ಅಂಬ್ಯುಲೆನ್ಸ್‌ಗಳು ಸುಲಿಗೆ ಮಾಡುತ್ತಿರುವುದರ ಬಗ್ಗೆ ಎಚ್ಚೆತ್ತುಕೊಂಡ ಸರ್ಕಾರ
  • ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ ಪಡಿಸಿ ಆದೇಶ ಹೊರಡಿಸಲು ಸಿದ್ಧತೆ
  • ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌  ಸಮಾಲೋಚನೆ 

ಬೆಂಗಳೂರು (ಮೇ.11):  ಕೋವಿಡ್‌ -19ರ ಉಪಟಳ ಹೆಚ್ಚಾಗುತ್ತಿದ್ದಂತೆ ಕೋವಿಡ್‌ ರೋಗಿಗಳನ್ನು ಸಾಗಿಸಲು ಹಾಗು ಶವ ಸಾಗಣೆ ಸಂದರ್ಭದಲ್ಲಿ ಕೆಲ ಖಾಸಗಿ ಅಂಬ್ಯುಲೆನ್ಸ್‌ಗಳು ಸುಲಿಗೆ ಮಾಡುತ್ತಿರುವುದರ ಬಗ್ಗೆ ಕೊನೆಗೂ ಸರ್ಕಾರ ಎಚ್ಚೆತ್ತುಕೊಂಡಿದೆ. ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ದರ ನಿಗದಿ ಪಡಿಸಿ ಆದೇಶ ಹೊರಡಿಸಲು ಮುಂದಾಗಿದೆ.

ಸೋಮವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಈ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊರೊನಾ ಸೋಂಕಿತರಿಗೆ ಕಾಂಗ್ರೆಸ್‌ನಿಂದ ಆಕ್ಸಿಜನ್, ಆಂಬುಲೆನ್ಸ್ ಸೇವೆ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಖಾಸಗಿ ಅಂಬ್ಯುಲೆನ್ಸ್‌ಗಳಿಗೆ ಏಕರೂಪದ ಶುಲ್ಕ ನಿಗದಿ ಮಾಡಿ ಆದೇಶ ಹೊರಡಿಸುತ್ತೇವೆ. ಈ ಶುಲ್ಕ ಮಿತಿಯನ್ನು ಉಲ್ಲಂಘಿಸುವ ಅಂಬ್ಯುಲೆನ್ಸ್‌ಗಳ ಪರವಾನಗಿ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಖಾಸಗಿ ಅಂಬ್ಯುಲೆನ್ಸ್‌ಗಳು ಬೇಕಾಬಿಟ್ಟಿದರ ವಸೂಲಿ ಮಾಡುವುದರಿಂದ ಬಡವರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ದರ ನಿಗದಿ ಮಾಡುವುದು ಅನಿವಾರ್ಯವಾಗಿದೆ ಎಂದು ಸವದಿ ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!