ಅಲೆಮಾರಿ ಮಕ್ಕಳಿಗೆ ಟೆಂಟ್ ಸ್ಕೂಲ್| ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್
ಚಾಮರಾಜನಗರ[ಜಕ.09]: ಅಲೆಮಾರಿ ಮಕ್ಕಳಿಗೆ ರಾಜ್ಯದಲ್ಲಿ ಟೆಂಟ್ ಸ್ಕೂಲ್‌ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲೆಮಾರಿ ಮಕ್ಕಳ ಪುನರ್ವಸತಿಗಾಗಿ ರಾಜ್ಯ ಸರ್ಕಾರದ ವತಿಯಿಂದ ದೊಡ್ಡ ಯೋಜನೆಯನ್ನೇ ಹಾಕಿಕೊಂಡಿದ್ದೇವೆ. ರಾಜ್ಯದಲ್ಲಿ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗಬಾರದು, ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂದು ಹೇಳಿದರು.
ಮಾ.31ರೊಳಗೆ ಮಕ್ಕಳ ಸಹಾಯವಾಣಿ:
ವಿದ್ಯಾರ್ಥಿಗಳಿಗೆ ನೆರವಾಗಲೆಂದು ಶಿಕ್ಷಣ ಇಲಾಖೆ ವತಿಯಿಂದ ಮಾ.31ರೊಳಗೆ ಸಹಾಯವಾಣಿ ಆರಂಭಿಸಲಾಗುವುದು. ಮಕ್ಕಳು, ಪೋಷಕರು ಹಾಗೂ ಶಿಕ್ಷಕರು ತಮ್ಮ ಸಮಸ್ಯೆಗಳ ಕುರಿತು ದೂರು ಸಲ್ಲಿಸಲು ಈ ಸಹಾಯವಾಣಿ ನೆರವಾಗಲಿದೆ. ನಿಗದಿತ ಅವಧಿಯೊಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಸಹಾಯವಾಣಿಯ ಉದ್ದೇಶವಾಗಿದೆ ಎಂದರು.