ತುಮಕೂರು ಸಿದ್ದಗಂಗಾ ಮಠದ ₹70 ಲಕ್ಷ ವಿದ್ಯುತ್ ಬಿಲ್ ಮನ್ನಾ ಮಾಡಿದ ಸರ್ಕಾರ!

Published : Dec 19, 2024, 08:07 PM ISTUpdated : Dec 20, 2024, 02:26 PM IST
ತುಮಕೂರು ಸಿದ್ದಗಂಗಾ ಮಠದ ₹70 ಲಕ್ಷ ವಿದ್ಯುತ್ ಬಿಲ್ ಮನ್ನಾ ಮಾಡಿದ ಸರ್ಕಾರ!

ಸಾರಾಂಶ

ಸಿದ್ಧಗಂಗಾ ಮಠಕ್ಕೆ ನೀಡಲಾಗಿದ್ದ 70.31 ಲಕ್ಷ ರೂ. ನೀರಾವರಿ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡುವುದಾಗಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಘೋಷಿಸಿದ್ದಾರೆ. ಮಠವು ಕೆಐಎಡಿಬಿ ಪೂರೈಸುವ ನೀರನ್ನು ಬಳಸಿಕೊಂಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ/ತುಮಕೂರು (ಡಿ.19): ವಿಶ್ವ ವಿಖ್ಯಾತ ಹಾಗೂ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠಕ್ಕೆ ರಾಜ್ಯ ಸರ್ಕಾರದಿಂದ ನೀರಾವರಿ ವಿದ್ಯುತ್ ಬಿಲ್ 70.31 ಲಕ್ಷ ರೂ. ನೀಡುವಂತೆ ನೊಟೀಸ್ ಜಾರಿ ಮಾಡಲಾಗಿತ್ತು. ಇದೀಗ ಮಠಕ್ಕೆ ವಿದ್ಯುತ್ ಬಿಲ್ ಪಾವತಿಗೆ ಪತ್ರ ನೀಡಿದ್ದು ತಪ್ಪಾಗಿದೆ. ಮಠಕ್ಕೆ ನೀರು ಬಳಸಿದ್ದರೂ ತಪ್ಪೇನಿಲ್ಲ, ಇನ್ನು ಮುಂದೆಯೂ ಮಠಕ್ಕೆ ನೀರನ್ನು ಬಳಕೆ ಮಾಡಬಹುದು. ಈಗ ಬಂದಿರುವ ನೊಟೀಸಿನ ಹಣವನ್ನು ಸರ್ಕಾರದಿಂದ ಮನ್ನಾ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಈ ಕುರಿತು ಬೆಳಗಾವಿಯ ಸುವರ್ಣ ಸೌಧದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ ಅವರು, ತುಮಕೂರಿನ ಸಿದ್ಧಗಂಗಾ ಮಠವು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಪೂರೈಸುವ ನೀರನ್ನು ಬಳಸಿಕೊಂಡಿದ್ದರೆ ತಪ್ಪೇನೂ ಇಲ್ಲ. ಇದರ ಬಾಬ್ತು ಏನೇ ಇದ್ದರೂ ಅದನ್ನು ಮನ್ನಾ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಕೆಐಎಡಿಬಿ ಸಿಇಒ ಮತ್ತು ಮುಖ್ಯ ಎಂಜಿನಿಯರ್ ಜತೆ ಮಾತನಾಡಲಾಗಿದೆ ಎಂದು ಹೇಳಿದರು.

ಸಿದ್ಧಗಂಗಾ ಮಠವು ಪ್ರತಿದಿನವೂ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಅನ್ನ ದಾಸೋಹ ಶಿಕ್ಷಣ ನೀಡುತ್ತಾ ಬಂದಿದೆ. ಸರಕಾರ ಕೂಡ ಇದನ್ನು ಸಿಎಸ್ಆರ್ ರೀತಿಯಲ್ಲಿ ತನ್ನ ಸಾಮಾಜಿಕ ಜವಾಬ್ದಾರಿ ಎಂದು ಭಾವಿಸುತ್ತದೆ. ಮಠಕ್ಕೆ ನೋಟಿಸ್ ಕೊಟ್ಟಿದ್ದರೆ ಅದು ತಪ್ಪು. ಸಿದ್ಧಗಂಗಾ ಮಠವು ವಿಶ್ವದಲ್ಲೇ ಶ್ರೇಷ್ಠವಾದ ಮಠವಾಗಿದೆ. ಅಲ್ಲಿ ಜಾತ್ಯತೀತವಾಗಿ ಶಿಕ್ಷಣ ಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ನೀರನ್ನು ಬಳಸಿಕೊಳ್ಳಲು ಮಠಕ್ಕೆ ಅನುಮತಿ ಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಅಭಿಯಂತರ ಅವರಿಂದ ಸಿದ್ದಗಂಗಾ ಮಠಕ್ಕೆ 70,31,438 ರೂ. ವಿದ್ಯುತ್ ಬಿಲ್ ಪಾವತಿಸುವಂತೆ ನೋಟೀಸ್ ನೀಡಲಾಗಿತ್ತು. ಅದರಲ್ಲಿ ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ ಅನ್ನು ನೀವು ಭರಿಸಲು ಕೋರಲಾಗಿದೆ ಎಂದು ಉಲ್ಲೇಖ ಮಾಡಲಾಗಿತ್ತು. ಈ ಪತ್ರವು ಕಳೆದ ಏಪ್ರಿಲ್ 6 ರಂದು  ಕೆಐಎಡಿಬಿಯಿಂದ ಸಿದ್ದಗಂಗಾ ಮಠಕ್ಕೆ ಬಂದಿತ್ತು. ಆದರೆ, ಏಪ್ರಿಲ್ 15 ರಂದು ಕೆಐಎಡಿಬಿಗೆ ಸಿದ್ದಗಂಗಾ ಮಠದಿಂದ ಮರು ಪತ್ರ ರವಾನೆ ಮಾಡಲಾಗಿತ್ತು.

ಇದನ್ನೂ ಓದಿ: Tumkur: ಗ್ಯಾರಂಟಿ ಕೊಟ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರಾಜ್ಯ ಸರ್ಕಾರ; ಸಿದ್ಧಗಂಗಾ ಮಠಕ್ಕೆ ಬಂತು 70 ಲಕ್ಷದ ಕರೆಂಟ್‌ ಬಿಲ್‌!

ಸಿದ್ದಗಂಗಾ ಮಠದ ಸ್ವಾಮೀಜಿ ಅವರು ಬರೆದ ಮರು ಪತ್ರ ಬರೆದು 8 ತಿಂಗಳಾದರೂ ಕೆಐಎಡಿಬಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ, ಪುನಃ ಕೆಐಎಡಿಬಿ ಅಧಿಕಾರಿಗಳು ಮೌಖಿಕವಾಗಿ ಬಿಲ್ ಕಟ್ಟುವಂತೆ ಮಠದ ಆಡಳಿತ ಮಂಡಳಿಯವರಿಗೆ ಸೂಚಿಸುತ್ತಿದ್ದರು.

ಸಿದ್ದಗಂಗಾ ಮಠದ ಸನಿಹದಲ್ಲೇ ಇರುವ ದೇವರಾಯಪಟ್ಟಣ ಕೆರೆಗೆ, ಕೆಐಎಡಿಬಿ ಪೈಪ್ ಲೈನ್ ಮೂಲಕ ಹೊನ್ನೆನಹಳ್ಳಿಯಿಂದ ಪ್ರಾಯೋಗಿಕವಾಗಿ ನೀರು ಹರಿಸಿದೆ. ಈ ಯೋಜನೆ ಪರಿಪೂರ್ಣವಾಗಿ ಜಾರಿಯಾದರೆ ಸಿದ್ದಗಂಗಾ ಮಠ ಸೇರಿದಂತೆ ದೇವರಾಯಪಟ್ಟಣ, ಮಾದನಾಯಕನ ಪಾಳ್ಯ, ಕುಂದೂರು ಗ್ರಾಮಕ್ಕೆ ನೀರು ಪೂರೈಕೆ ಆಗಲಿದೆ. ಇಲ್ಲಿವರೆಗೆ ಪ್ರಾಯೋಗಿಕವಾಗಿ ಅಷ್ಟೇ ನೀರು ಹರಿಸಲಾಗಿದೆ. ಈ ಗ್ರಾಮಗಳಿಗೆ ವಿತರಣೆ ಆಗುತ್ತಿಲ್ಲ. ಇದಕ್ಕೆ ವೆಚ್ಚವಾದ ವಿದ್ಯುತ್ ಬಿಲ್ ಅನ್ನು  ಸಿದ್ದಗಂಗಾ ಮಠ ಪಾವತಿಸಬೇಕು ಎಂದು ಕೆಐಎಡಿಬಿ ಬರೆದಿರುವ ಪತ್ರ ಈಗ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಈ ವಿವಾದಕ್ಕೆ ಸ್ವತಃ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಅಂತ್ಯ ಹಾಡಿದ್ದಾರೆ.

ಇದನ್ನೂ ಓದಿ: ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ