ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯುತ್ತಿರುವ ಕುರಿತು ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ತಿಳಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಾಮಾಜಿಕ ಹಾಗೂ ಕಾನೂನಿಗೆ ಭಂಗ ತರುವ ಅಂಶಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಹುಬ್ಬಳ್ಳಿ (ಅ.4) : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯುತ್ತಿರುವ ಕುರಿತು ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ತಿಳಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಾಮಾಜಿಕ ಹಾಗೂ ಕಾನೂನಿಗೆ ಭಂಗ ತರುವ ಅಂಶಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರಗೆ ಪತ್ರ ಬರೆದಿರುವ ಅವರು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳಲ್ಲೇ ಇಂತಹ ತುಷ್ಟೀಕರಣ ರಾಜಕಾರಣ ಪರಾಕಾಷ್ಠತೆ ತಲುಪಿದೆ. ಇಂತಹ ಪ್ರಕರಣಗಳಲ್ಲಿನ ಆರೋಪಿಗಳು ಸಮಾಜ ಘಾತುಕ ಶಕ್ತಿಗಳಾಗಿರುತ್ತಾರೆ. ಈ ಪ್ರಕರಣಗಳನ್ನು ಕೈಬಿಡುವುದರಿಂದ ತಮ್ಮ ಸರ್ಕಾರ ರಾಷ್ಟ್ರೀಯ ಭದ್ರತೆಯ ವಿಷಯದೊಂದಿಗೆ ರಾಜಿ ಮಾಡಿಕೊಂಡಂತಲ್ಲವೇ? ಎಂದು ಪ್ರಶ್ನಿಸಿದ್ದಾರೆ.
Siddaramaiah ಮೊದಲ ಅವಧಿಯಲ್ಲಿ ಟಿಪ್ಪು, ಇವಾಗ ಔರಂಗಜೇಬ್‌ನನ್ನು ಮರೆಸಲಾಗುತ್ತಿದೆ: ಪ್ರಲ್ಹಾದ್ ಜೋಶಿ
13ರ ಸೆ. 2023ರ ಎಡಿಜಿಪಿ ಕಾನೂನು ಹಾಗೂ ಸುವ್ಯವಸ್ಥೆ ಹೊರಡಿಸಿರುವ ಸುತ್ತೋಲೆಯಲ್ಲಿ ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 16, 2022ರಂದು ನಡೆದ ಗಲಭೆ ಸೇರಿದಂತೆ ರಾಜ್ಯದಲ್ಲಿನ ಒಟ್ಟು 11 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂದಕ್ಕೆ ಪಡೆಯುವ ಬಗ್ಗೆ ಪ್ರಕ್ರಿಯೆ ನಡೆದಿರುವುದು ಅತ್ಯಂತ ಹೇಯ ಚಿಂತನೆ. ಈ ಘಟನೆಯಿಂದ ಹುಬ್ಬಳ್ಳಿ ಜನ ಅಷ್ಟೇ ಅಲ್ಲದೇ ಇಡೀ ರಾಜ್ಯದ ಜನ ಬೆಚ್ಚಿಬಿದ್ದಿದ್ದರು. ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್ ವಾಹನದ ಮೇಲೆ ನಿಂತು ಘೋಷಣೆ ಕೂಗಿದ್ದರು. ಈ ಮೊಕದ್ದಮೆ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಸರ್ಕಾರದ ಈ ತುಷ್ಟೀಕರಣ ಧೋರಣೆ ಸ್ಪಷ್ಟವಾಗಿದ್ದು ಇದರ ಪರಿಣಾಮವನ್ನು ಈಗಾಗಲೇ ರಾಜ್ಯದಲ್ಲಿ ನಡೆದ ವಿಶೇಷವಾಗಿ ಶಿವಮೊಗ್ಗ ಮುಂತಾದ ನಗರಗಳಲ್ಲಿ ಇತ್ತೀಚೆಗೆ ನಡೆದ ಗಲಭೆಗಳೇ ಸಾಕ್ಷಿ.
ಡಿ.ಜಿ. ಹಳ್ಳಿ, ಕೆ.ಜಿ. ಹಳ್ಳಿ ಪ್ರದೇಶಗಳಲ್ಲಿ ನಿಮ್ಮದೇ ಪಕ್ಷದ ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಬೆಂಕಿ ಹಚ್ಚಿದ್ದು ಇದೇ ಸಮಾಜ ಘಾತುಕ ಶಕ್ತಿಗಳು ಎಂಬುದನ್ನು ಮರೆತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನು ನೋಡಿದರೆ ದಲಿತರೂ ರಾಜ್ಯದಲ್ಲಿ ಸುರಕ್ಷಿತವಾಗಿಲ್ಲ ಎಂಬಂತಾಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಲೋಕಸಭಾ ಚುನಾವಣೆ: ಧಾರವಾಡ ಹಿಂದು ಮತಗಳನ್ನು ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್!
ಸಮಾಜ ಘಾತುಕ ಶಕ್ತಿಗಳ ಮೇಲಿನ ಕೇಸ್ ವಾಪಸ್ ಪಡೆಯುವ ಸರ್ಕಾರದ ಕ್ರಮದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ