ಗೃಹ ಲಕ್ಷ್ಮಿ ಯೋಜನೆ ನೊಂದಣಿ ಸ್ಥಗಿತ: ಮಹಿಳೆಯರಿಗೆ ಶಾಕ್‌ ಕೊಟ್ಟ ಸರ್ಕಾರ

By Sathish Kumar KHFirst Published Sep 7, 2023, 1:33 PM IST
Highlights

ರಾಜ್ಯದಲ್ಲಿ ಮಹಿಳೆಯರಿಗೆ 2000 ರೂ. ಸಹಾಯಧನ ನೀಡುವ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸ್ಥಗಿತಗೊಳಿಸಿದೆ.

ಬೆಂಗಳೂರು (ಸೆ.07): ರಾಜ್ಯದಲ್ಲಿ ಮಹಿಳೆಯರಿಗೆ (ಮನೆ ಯಜಮಾನಿಗೆ) 2000 ರೂ. ಸಹಾಯಧನ ನೀಡುವ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸ್ಥಗಿತಗೊಳಿಸಿದೆ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಸರ್ಕಾರವು ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ರೂ.2000 ಹಣ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು 'ಗೃಹ ಲಕ್ಷ್ಮಿ ಯೋಜನೆ'ಯ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತಗೊಂಡಿದೆ. ನೋಂದಣಿಯಾದ ಎಲ್ಲಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಶೀಘ್ರವೇ ಅವಕಾಶ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆಮಾಡಿ ಎಂದು ತಿಳಿಸಿದೆ.

Latest Videos

Bengaluru ಬಿಎಂಟಿಸಿ ಬಸ್‌ ದರ ಇಳಿಕೆ: ಗುಡ್‌ ನ್ಯೂಸ್‌ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ

8 ಲಕ್ಷ ಮಹಿಳೆಯರ ನೋಂದಣಿಗೆ ಕೆವೈಸಿ ಸಮಸ್ಯೆ: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ ಒಟ್ಟು ಫಲಾನುಭವಿಗಳ ಸಂಖ್ಯೆ 1.28 ಕೋಟಿ ಆಗಿದೆ. ಆದರೆ, ಈವರೆಗೆ 1.13 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಉಳಿದಂತೆ 15 ಲಕ್ಷ ಫಲಾನುಭವಿಗಳಲ್ಲಿ ಕೆವೈಸಿ ಸಮಸ್ಯೆಗಳು ಕಂಡುಬರುತ್ತಿದೆ. ಅದರಲ್ಲಿಯೂ ಸುಮಾರು 8 ಲಕ್ಷ ಜನರು ಈವರೆಗೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿಲ್ಲ. ಇವರು ನೊಂದಣೆ ಆಗಬೇಕಿದ್ದು ತಾಂತ್ರಿಕ ಸಮಸ್ಯೆಯಿಂದ ನೊಂದಣಿಗೆ ಬ್ರೇಕ್ ನೀಡಲಾಗಿದೆ. 

ನೋಂದಣಿಗೆ ಅಂತಿಮ ಗಡುವು ಇಲ್ಲ: ಇನ್ನು ಈ ಹಿಂದೆ ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಯಾವುದೇ ಅಂತಿಮ ದಿನಾಂಕ (ಡೆಡ್ ಲೈನ್)  ನೀಡಲಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳಿತ್ತು. ಆದರೆ, ಈಗ ಯೋಜನೆಗೆ ಮಹಿಳೆಯರು ನೋಂದಣಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿರುವಾಗಲೇ ಸ್ಥಗಿತ ಮಾಡಲಾಗಿದೆ. ಈಗ ನೊಂದಣಿಯಾಗಿರುವವರ ಅಕೌಂಟ್ ಗೆ ಹಣ ಜಮೆಯಾದ ನಂತರ ಮತ್ತೆ ಹೊಸ ನೊಂದಣಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸದೆ.

click me!