ಎಸ್.ಎಂ.ಕೃಷ್ಣ ಆಗಲಿಕೆಯಿಂದ ಕರ್ನಾಟಕ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ: ಬೊಮ್ಮಾಯಿ

By Sathish Kumar KH  |  First Published Dec 10, 2024, 11:21 AM IST

ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರನ್ನು ದೇಶದ ಹಿರಿಯರು, ಮಾರ್ಗದರ್ಶಕರು ಎಂದು ಬಣ್ಣಿಸಿರುವ ಅವರು, ಅವರ ಅಗಲಿಕೆಯಿಂದ ದೇಶ ಬಡವಾಗಿದೆ ಎಂದಿದ್ದಾರೆ.


ದೆಹಲಿ (ಡಿ.10): ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ಸ್ವಾತಂತ್ರ್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ  ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖ ಹಾಗೂ ದಿಗ್ಧಮೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಂತಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ ಬದುಕು ನಡೆಸಿ, ಆದರ್ಶ ಮಯ ಜೀವನ ನಡೆಸಿ, ಇಡೀ ಭಾರತಕ್ಕೆ ಪ್ರಿಯರಾಗಿರುವಂತಹವರು. ಎಸ್.ಎಂ ಕೃಷ್ಣ, ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದ ನಂತರ ತಮ್ಮ ಸೊಸಿಯಲಿಸ್ ಮನೋಭಾವನೆ ಬಿಟ್ಟುಕೊಡದೇ ಪಥಮ ಬಾರಿಗೆ ಸ್ವತಂತವಾಗಿ ಸ್ಪರ್ಧೆ ಮಾಡಿ ಗೆದ್ದು ಬಂದಿದ್ದರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ನಾಲ್ಕೂ ಸದನಗಳಲ್ಲಿ ಸೇವೆ ಮಾಡಿದ್ದಾರೆ. ರಾಜ್ಯದ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ದೇಶದ ಸೇವೆ ಹಾಗೂ ರಾಜ್ಯದ ಸೇವೆ ಮಾಡಿದ್ದಾರೆ.

Tap to resize

Latest Videos

ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬೆಂಗಳೂರಿನ ಬೆಳವಣಿಗೆ, ಐಟಿ ಬಿಟಿ ವಿಚಾರದಲ್ಲಿ ಅವರು ನೀಡಿದ ಕೊಡುಗೆ ಅಪಾರ, ಅವರು ಜಾರಿಗೆ ತಂದಿರುವ ಮಿಡ್ ಡೆ ಮೀಲ್ ಯೋಜನೆ ಯಶಸ್ವಿಯಾಗಿದೆ. ಅವರು ರಾಜಕಾರಣದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ಕೂಡ ತಮ್ಮ ವ್ಯಕ್ತಿತ್ವವನ್ನು ಬಿಟ್ಟುಕೊಡದೇ ಅತ್ಯಂತ ಸ್ವಾಭಿಮಾನದ ಬದುಕು ನಡೆಸಿದರು.

ಇದನ್ನೂ ಓದಿ: ಎಸ್ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದ ಸರ್ಕಾರ!

ಅವರು ಬಿಜೆಪಿ ಸೇರಿ ನಮ್ಮ ಪಧಾನ ಮಂತ್ರಿಗಳಿಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು. ಹಿಂದಿನ ಪೀಳಿಗೆಯ ಮಹತ್ವದ ಘಟ್ಟ ಕಳೆದುಕೊಂಡಂತಾಗಿದೆ. ಬರುವಂತಹ ದಿನಗಳಲ್ಲಿ ಅವರ ಬದುಕು ನಮಗೆ ಆದರ್ಶವಾಗಲಿ, ಎಸ್.ಎಂ. ಕೃಷ್ಣ ಅವರು ನನಗೆ ವಯಕ್ತಿಕವಾಗಿ ಅತ್ಯಂತ ಹತ್ತಿರವಾಗಿದ್ದ ನಾಯಕರು, ನಮ್ಮ ತಂದೆಯ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ಅವರ ಅಗಲಿಗೆ ನನಗೆ ಬಹಳ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

click me!