ಕರ್ನಾಟಕದಲ್ಲಿ ಕೈಗಾರಿಕೆಗಳ ಆರಂಭಕ್ಕೆ 11 ಸಾವಿರ ಎಕರೆ ಭೂಮಿ ಲಭ್ಯ: ಸಚಿವ ಎಂ.ಬಿ. ಪಾಟೀಲ

By Sathish Kumar KH  |  First Published Jun 27, 2023, 6:58 PM IST

ರಾಜ್ಯದಲ್ಲಿ ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಲಭ್ಯವಿದೆ. ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ.


ಬೆಂಗಳೂರು (ಜೂ.27): ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಈ ಸಂಬಂಧ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿ ಮಾತನಾಡಿದ ಅವರು, ಕೈಗಾರಿಕೆಗಳ ಬಳಕೆಗೆಂದು ಸರಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಜತೆಗೆ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ವಿವರಿಸಿದರು.

Tap to resize

Latest Videos

Good News: ಬೇಳೆ ಕಾಳುಗಳ ಬೆಲೆ ತಗ್ಗಿಸಲು ಮುಂದಾದ ಕೇಂದ್ರ ಸರ್ಕಾರ

ಜುಲೈ 17ರೊಳಗೆ ವರದಿ ಕೊಡಿ:  ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರಕಾರದ ಪರ ಆದೇಶ ಬಂದಿದೆ. ಆದರೆ, ಸರಕಾರದ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್‌ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು. ಕೆಐಎಡಿಬಿ ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ತಮಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. 

ನರಸಾಪುರದ ಭೂಸ್ವಾಧೀನಕ್ಕೆ ಅಧಿಸೂಚನೆಯಿಲ್ಲ: ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ" ಎಂದು ನಿರ್ದೇಶಿಸಿದರು.

ಮೈಸೂರು- ಬೆಂಗಳೂರು ಹೆದ್ದಾರಿ ಲೋಪ ಪತ್ತೆಗೆ ತಾಂತ್ರಿಕ ತಂಡ: ಸಚಿವ ಚೆಲುವರಾಯಸ್ವಾಮಿ

ಅಗತ್ಯ ಆಧಾರಿತ ಉದ್ದಿಮೆ ಆರಂಭಕ್ಕೆ ಆದ್ಯತೆ: ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕೆಂದು ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲಕಾರಣವಾಗಿದೆ ಎಂದು ಹೇಳಿದರು. ಈ ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಆಯುಕ್ತ ಮಹೇಶ್‌ ಮುಂತಾದವರು ಉಪಸ್ಥಿತರಿದ್ದರು.

click me!