ಬೆಂಗ್ಳೂರು ಗಲಭೆ: ಆರೋಪಿಗಳಿಂದ ನಷ್ಟ ವಸೂಲಿಗೆ ಕ್ಲೇಮ್ ಕಮೀಷನರ್ ನೇಮಕ

By Suvarna News  |  First Published Aug 28, 2020, 3:54 PM IST

ಬೆಂಗಳೊರು ಗಲಭೆ ಪ್ರಕರಣದಲ್ಲಿ ಸಾರ್ವಜನಿಕರ ಆಸ್ತಿಪಾಸ್ತಿ ಉಂಟು ಮಾಡಿದ ಪುಂಡರಿಂದ ವಸೂಲಿಗೆ ಕ್ಲೇಮ್ ಕಮಿಷನರ್‌ ನನ್ನು ಹೈಕೋರ್ಟ್ ನೇಮಕ ಮಾಡಿದೆ.


ಬೆಂಗಳೂರು,(ಆ.28) ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ವಾಹನಗಳನ್ನು ಹಾನಿ ಮಾಡಿದವರಿಂದಲೇ ನಷ್ಟ ಭರಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ ಆಗಿ ಹೈಕೋರ್ಟ್ ನೇಮಿಸಿದೆ.

 ಘಟನೆಯಲ್ಲಿ ಸಾರ್ವಜನಿಕರ ಆಸ್ತಿ, ವಾಹನಗಳು, ಎಷ್ಟು ಪ್ರಮಾಣದಲ್ಲಿ ಹಾನಿಯಾಗಿವೆ? ಇದರ ಮೌಲ್ಯ, ಒಟ್ಟು ನಷ್ಟದ ಅಂದಾಜು ಕುರಿತಂತೆ ತನಿಖೆ ನಡೆಸಲಿದೆ. ವಿಡಿಯೋ ಮೂಲಕ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳುವುದು ಹಾಗೂ ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಬೇಕೆಂದು ಕ್ಲೇಮ್ ಕಮೀಷನರ್ ಗೆ ಸೂಚನೆ ಕೊಟ್ಟಿದೆ.

Tap to resize

Latest Videos

ಬೆಂಗಳೂರು ಗಲಭೆ ಕೇಸ್‌: ಮ್ಯಾಜಿಸ್ಪ್ರೇಟ್‌ ತನಿಖೆ ಶುರು

ಕ್ಲೇಮ್ ಕಮೀಷನರ್‍ ಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಸಿಬ್ಬಂದಿ, ವಾಹನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡಬೇಕೆಂದು ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಸರ್ಕಾರಕ್ಕೆ ಸೂಚಸಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ಕೆಲವು ದುಷ್ಕರ್ಮಿಗಳು ಸಾರ್ವಜನಿಕರಿಗೆ ಸೇರಿದ ವಾಹನಗಳಿಗೆ ಬೆಂ ಕಿಹಚ್ಚಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ್ದರು.

ಉತ್ತರಪ್ರದೇಶ ಸರ್ಕಾರ ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಿದ್ದರಿಂದಲೇ ವಸೂಲಿ ಮಾಡಲು ಕಾಯ್ದೆಯೊಂದನ್ನು ಜಾರಿಗೆ ತಂದಿತ್ತು. ಸುಪ್ರೀಂಕೋರ್ಟ್ ಅಲ್ಲಿನ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಇದೀಗ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಉಂಟಾದ ಗಲಭೆ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಂದಲೇ ನಷ್ಟ ಭರಿಸಲು ಮುಂದಾಗಿದೆ.

click me!