ಶಿವರಾಮ ಕಾರಂತ ಬಡಾವಣೆ ಫಲಾನುಭವಿಗಳಿಗೆ ಗುಡ್‌ನ್ಯೂಸ್! ನಿವೇಶನ ಹಂಚಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

Kannadaprabha News   | Kannada Prabha
Published : Jul 04, 2026, 07:38 AM IST
Karnataka HC green signal for site allotment in Shivaram Karanth Layout bengaluru

ಸಾರಾಂಶ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಬೆಂಗಳೂರು (ಜು.4) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸರ್ಕಾರ ಹಾಗೂ ಬಿಡಿಎ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಮತ್ತು ನ್ಯಾಯಮೂರ್ತಿ ಟಿ.ವೆಂಕಟೇಶ್‌ ನಾಯ್ಕ ಅವರಿದ್ದ ವಿಶೇಷ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರದ ಪರ ರಾಜ್ಯ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ನಿವೇಶನ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು. ಬಡಾವಣೆ ಅಭಿವೃದ್ಧಿ ಕಾಮಗಾರಿಗಾಗಿ 1,100 ಕೋಟಿ ರು.‌ಸಾಲ ಪಡೆದು ಬಡ್ಡಿ ಕಟ್ಟಲಾಗುತ್ತಿದೆ. ಬಡಾವಣೆ ಕಾಮಗಾರಿ ಅಂತಿಮ ಹಂತದಲ್ಲಿದೆ. ನಿವೇಶನ ಹಂಚಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಹಾಗಾಗಿ, ಅರ್ಜಿ ಸ್ವೀಕರಿಸಲು ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಅದಕ್ಕೆ ಒಪ್ಪಿದ ಪೀಠ, ದುಬಾರಿ ಅರ್ಜಿ ಶುಲ್ಕ ವಿಧಿಸದಂತೆ ಸರ್ಕಾರಕ್ಕೆ ಸಲಹೆ ನೀಡಿ ಅರ್ಜಿ ಸ್ವೀಕರಿಸಲು ಅನುಮತಿ ನೀಡಿತು. ಇದೇ ವೇಳೆ ಅರ್ಜಿ ಸ್ವೀಕರಿಸಿದರೂ ನಿವೇಶನ ಹಂಚಿಕೆಗೆ ಈ ಹಿಂದೆ ನೀಡಲಾಗಿರುವ ನಿರ್ಬಂಧವನ್ನು ಇದೇ ವೇಳೆ ಮುಂದುವರಿಸಿತು.

ಈ ಹಿಂದೆಯೂ ಬಿಡಿಎ ಎರಡು ಬಾರಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಆದರೆ, ನ್ಯಾಯಾಲಯ ಅನುಮತಿ ನೀಡಿರಲಿಲ್ಲ. ಬದಲಿಗೆ ಬಡಾವಣೆ ಅಭಿವೃದ್ಧಿ ವಿಧಿ ವಿಧಾನಗಳ ಬಗ್ಗೆ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತ್ತು. ನಿವೇಶನ ಹಂಚಿಕೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್‌ 2024ರಲ್ಲಿ ಮಧ್ಯಂತರ ಅದೇಶ ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ! - ಇ.ಡಿ. ದಾಳಿ ಬೆನ್ನಲ್ಲೇ ಲೋಕಾಯುಕ್ತರಿಂದ ಶಾಕ್
GBA Clear footpath encroachments: ತೆರವು ಮಾಡಿದ ಫುಟ್‌ಪಾತಲ್ಲಿ ಮತ್ತೆ ವ್ಯಾಪಾರ ಶುರು!