'ಇವರ ದುರಹಂಕಾರ ಹೆಚ್ಚಾಗಿದೆ..; ತಡೆಯಾಜ್ಞೆ ಇದ್ರೂ ಹೇಗೆ ತನಿಖೆ ನಡೆಸಿದ್ರಿ? ಪೊಲಿಸರ ನಡೆಗೆ ಹೈಕೋರ್ಟ್ ಗರಂ

Kannadaprabha News   | Kannada Prabha
Published : Oct 31, 2026, 06:49 AM IST
Karnataka High Court on Police department

ಸಾರಾಂಶ

ಕ್ರಿಮಿನಲ್‌ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ಇದ್ದರೂ ದೋಷಾರೋಪ ಪಟ್ಟಿ ಸಲ್ಲಿಸುತ್ತಿರುವ ಪೊಲೀಸರ ವಿರುದ್ಧ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವ ತನಿಖಾಧಿಕಾರಿ ಹಾಗೂ ಮೇಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ನ್ಯಾಯಮೂರ್ತಿಗಳು ನೀಡಿದ್ದಾರೆ.

ಬೆಂಗಳೂರು (ಅ.31): ಕ್ರಿಮಿನಲ್‌ ಪ್ರಕರಣಗಳಲ್ಲಿ ತನಿಖೆಗೆ ತಡೆಯಾಜ್ಞೆ ನೀಡಿದ್ದರೂ ದೋಷಾರೋಪ ಪಟ್ಟಿ ಸಲ್ಲಿಸುತ್ತಿರುವ ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕ್ರಿಮಿನಲ್ ಪ್ರಕರಣವೊಂದನ್ನು ರದ್ದುಪಡಿಸುವಂತೆ ಕೋರಿ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ, ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದ ಮುಂದೆ ಬಂದಿತ್ತು.

ಕ್ರಿಮಿನಲ್ ಪ್ರಕರಣದಲ್ಲಿ ತನಿಖೆಗೆ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್

ಆರೋಪಿ ಪರ ವಕೀಲರು, ಅರ್ಜಿದಾರರ ವಿರುದ್ಧದ ಕ್ರಿಮಿನಲ್‌ ಪ್ರಕರಣದಲ್ಲಿನ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೆ, ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ನ್ಯಾಯಮೂರ್ತಿಗಳ ಗಮನಕ್ಕೆ ತಂದರು.

ಈ ಮಾತಿಗೆ ಸರ್ಕಾರಿ ಅಭಿಯೋಜಕರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ತನಿಖೆಗೆ ತಡೆಯಾಜ್ಞೆ ನೀಡಿದ್ದರೂ ಹೇಗೆ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಏಕೆ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದಾಗ ಸರ್ಕಾರಿ ವಕೀಲರು, ಪ್ರಕರಣದ ಕುರಿತು ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು ಎಂದು ತಿಳಿಸಿದರು.

ಪೊಲೀಸರಿಗೆ ಮೈಮೇಲೆ ಜ್ಞೆ ಇದೆಯೋ? ಇಲ್ಲವೋ?

ಆಗ ನ್ಯಾಯಮೂರ್ತಿಗಳು, ಇದೊಂದೇ ಪ್ರಕರಣವಲ್ಲ. ಹಲವು ಪ್ರಕರಣಗಳಲ್ಲಿ ಇದೇ ರೀತಿ ಪೊಲೀಸರು ನಡೆದುಕೊಂಡಿದ್ದಾರೆ. ಅವರಿಗೆ ಮೈ ಮೇಲೆ ಪ್ರಜ್ಞೆ ಇದೆಯೋ? ಅಥವಾ ಇಲ್ಲವೋ? ದುರಂಹಕಾರ ತಲೆಗೇರಿದರೆ ಪೊಲೀಸರು ಈ ರೀತಿ ನಡೆದುಕೊಳ್ಳುತ್ತಾರೆ. ಮೇಲಾಧಿಕಾರಿಗಳು ಏನು ಮಾಡುತ್ತಿದ್ದಾರೆ? ತನಿಖಾಧಿಕಾರಿಗಳು ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಳ್ಳುತ್ತಿದ್ದರೂ, ಅದನ್ನು ನೋಡಿಕೊಂಡು ಸುಮ್ಮನಿದ್ದಾರೆ.

ತನಿಖಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದರೆ ಸರಿ ಹೋಗುತ್ತದೆ. ಕೇವಲ ತನಿಖಾಧಿಕಾರಿಯನ್ನು ಅಮಾನತು ಮಾಡಿದರೆ ಸಾಲದು. ಅವರ ಮೇಲಾಧಿಕಾರಿಯ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಆದೇಶಿಸಲಾಗುವುದು ಎಂದು ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದರು. ನಂತರ ಸರ್ಕಾರಿ ಅಭಿಯೋಜಕರ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕನ್ನಡದ ಬಗ್ಗೆ ನಾವು ಹೇಳುವ 5 ಸುಳ್ಳುಗಳು, ಕಹಿ ಸತ್ಯ! ಅಭಿಮಾನ-ವಾಸ್ತವಕ್ಕಿರೋ ಅಂತರ
ರಾಜ್ಯಾದ್ಯಂತ ಪಕ್ಷಿ ಗಣತಿ ಆರಂಭ; ಮೊದಲ ದಿನವೇ 179 ಹಕ್ಕಿ ಪ್ರಭೇದಗಳನ್ನು ದಾಖಲಿಸಿ ನಂ.1 ಆದ ಉತ್ತರ ಕನ್ನಡ!