ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ಕಾಮೆಂಟ್ ಕೇಸ್: ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Published : Jun 22, 2026, 01:11 PM IST
Darshan and Vijayalakshmi

ಸಾರಾಂಶ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮಹಿಳೆಯರ ವಿರುದ್ಧದ ಇಂತಹ ಅಪರಾಧ ಗಂಭೀರವಾದುದು ಎಂದು ಪರಿಗಣಿಸಿ ಪೀಠವು ಈ ಆದೇಶ ನೀಡಿದೆ.

ಬೆಂಗಳೂರು (ಜೂ.22): ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮೂವರು ಆರೋಪಿಗಳ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠವು ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ದರ್ಶನ್ ಅಭಿನಯದ ಬಹುನಿರೀಕ್ಷಿತ 'ಡೆವಿಲ್' ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಜಯಲಕ್ಷ್ಮಿ ಅವರ ಬಗ್ಗೆ ಅತ್ಯಂತ ಅಸಭ್ಯ ಮತ್ತು ಅಶ್ಲೀಲವಾಗಿ ಕಾಮೆಂಟ್ ಮಾಡಲಾಗಿತ್ತು. ಈ ವಿಚಾರವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಖುದ್ದಾಗಿ ಆಗಮಿಸಿ ದೂರು ನೀಡಿದ್ದರು. ಅವರ ದೂರಿನನ್ವಯ ನಗರದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳು ಯಾರು?:

ಈ ಪ್ರಕರಣದಲ್ಲಿ ಪ್ರಶಾಂತ್ ತಲ್ವಾರ್, ಚಂದ್ರಶೇಖರ್ ಮತ್ತು ನಿಂಗರಾಜ್ ಗುಲಾಪ್ಪ ತಲ್ವಾರ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳು ಈ ಹಿಂದೆ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಆರೋಪದ ಗಂಭೀರತೆಯನ್ನು ಪರಿಗಣಿಸಿದ್ದ ಸೆಷನ್ಸ್ ಕೋರ್ಟ್ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗಳು:

ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತು ತಮಗೆ ಜಾಮೀನು ನೀಡುವಂತೆ ಕೋರಿ ಈ ಮೂವರು ಆರೋಪಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಅಶ್ಲೀಲ ಕಾಮೆಂಟ್ ಮಾಡುವುದು ಕಾನೂನುಬಾಹಿರ ಮತ್ತು ಗಂಭೀರ ಅಪರಾಧ ಎಂದು ಪರಿಗಣಿಸಿ, ಜಾಮೀನು ನೀಡಲು ನಿರಾಕರಿಸಿದೆ. ಈ ಮೂಲಕ ಅಶ್ಲೀಲ ಕಾಮೆಂಟ್ ಮಾಡಿದ ಕಿಡಿಗೇಡಿಗಳಿಗೆ ಕಾನೂನಿನ ಬಿಸಿ ಮುಟ್ಟಿಸಿದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಜೆಪಿಗೆ ಡಿವಿ ಸದಾನಂದ ಗೌಡ ಬಿಗ್ ಶಾಕ್; ‘ಪ್ರೆಸ್ಟೀಜ್ ಅಪಾರ್ಟ್‌ಮೆಂಟ್’ ರಹಸ್ಯ ಸಭೆ ಬಯಲು ಮಾಡಿದ ಮಾಜಿ ಸಿಎಂ!
Bengaluru Trains: ಟಿಕೆಟ್‌ ಸಿಗ್ತಿಲ್ಲ, ಹೆಚ್ಚು ಟ್ರೇನ್‌ ಇಲ್ಲ ಎನ್ನೋರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ!