ಬಳ್ಳಾರಿಯಲ್ಲಿ ಅಳಿವಿನಂಚಿನ ಅಪರೂಪದ ಹೆಬ್ಬಾಕ ಪಕ್ಷಿಗಳ ಸಂರಕ್ಷಣೆಗೆ ಹೈಕೋರ್ಟ್ ಮಹತ್ವದ ನಿರ್ದೇಶನ.

Kannadaprabha News, Ravi Janekal |   | Kannada Prabha
Published : Nov 19, 2026, 06:48 AM IST
Karnataka HC Seeks Great Indian Bustard Population Data

ಸಾರಾಂಶ

ಅಳಿವಿನಂಚಿನಲ್ಲಿರುವ ಅಪರೂಪದ 'ಗ್ರೇಟ್ ಇಂಡಿಯನ್ ಬಸ್ಟರ್ಡ್' (ಹೆಬ್ಬಾಕ) ಪಕ್ಷಿಗಳ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಹೈಕೋರ್ಟ್ ಅರಣ್ಯ ಇಲಾಖೆಗೆ ನಿರ್ದೇಶಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ 349 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸಂರಕ್ಷಣಾ ಯೋಜನೆಯ ಪ್ರಗತಿಯ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಬೆಂಗಳೂರು(ನ.19): ರಾಜ್ಯದಲ್ಲಿ ಅಳಿವಿನಂಚಿನಲ್ಲಿರುವ ಅಪರೂಪದ ‘ಗ್ರೇಟ್ ಇಂಡಿಯನ್ ಬಸ್ಟರ್ಡ್’ (ಹೆಬ್ಬಾಕ) ಪಕ್ಷಿಗಳ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್​ ನಿರ್ದೇಶಿಸಿದೆ.

349 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ

ಹೆಬ್ಬಾಕಗಳ ಸಂಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಳ್ಳಾರಿ ಮೂಲದ ಪರಿಸರ ವಾದಿ ಎಡ್ವರ್ಡ್ ಸಂತೋಷ್ ಮಾರ್ಟಿನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಹೆಬ್ಬಾಕ ಪಕ್ಷಿಗಳ ಆವಾಸಸ್ಥಾನದ ಸಂರಕ್ಷಣೆಗಾಗಿ ಬಳ್ಳಾರಿ ಜಿಲ್ಲೆಯಲ್ಲಿ 349 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಕೋರ್ಟ್ ಸೂಚನೆ ಏನು?

ಇದಕ್ಕೂ ಮೊದಲು, ರಾಜ್ಯದಲ್ಲಿ ಹೆಬ್ಬಾಕ ಪಕ್ಷಿಗಳ ಸಂರಕ್ಷಣೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಹೆಬ್ಬಾಕಗಳ ಪ್ರಸ್ತುತ ಸಂಖ್ಯೆಯ ವಿವರಗಳನ್ನು ಸಲ್ಲಿಸಬೇಕು. ಭೂಸ್ವಾಧೀನ ಪ್ರಕ್ರಿಯೆಯ ಕಾಲಮಿತಿ ಮತ್ತು ಸಂರಕ್ಷಣಾ ಯೋಜನೆಯ ಪ್ರಗತಿಯ ಕುರಿತು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಅವರು ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಪೀಠ ಸೂಚಿಸಿದೆ. ಅಲ್ಲದೆ, ಅರ್ಜಿದಾರರಾದ ಎಡ್ವರ್ಡ್ ಸಂತೋಷ್ ಮಾರ್ಟಿನ್ ಅವರು ಈ ಸ್ಥಳಕ್ಕೆ ಭೇಟಿ ನೀಡಿ, ಸಂರಕ್ಷಣೆ ಕುರಿತು ತಮ್ಮ ಸಲಹೆ ನೀಡಬಹುದು ಎಂದು ಅನುಮತಿ ನೀಡಿದೆ.

ರಾಜ್ಯದಲ್ಲಿ ಹೆಬ್ಬಾಕ ಹಕ್ಕಿಗಳು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹುಲ್ಲುಗಾವಲು ಪ್ರದೇಶಕ್ಕೆ ಸೀಮಿತವಾಗಿವೆ. ಈ ಹಿಂದೆ 9 ರಿಂದ 12ರಷ್ಟಿದ್ದ ಇವುಗಳ ಸಂಖ್ಯೆ ಕುಸಿದಿತ್ತು. ರಾಜ್ಯದಲ್ಲಿ ಇವುಗಳ ಸಂಖ್ಯೆ ಹೆಚ್ಚಳ ಮತ್ತು ಸಂಕ್ಷಣೆಗಾಗಿ ತಕ್ಷಣವೇ ಕಾರ್ಯಯೋಜನೆ ಸಿದ್ಧಪಡಿಸಿ ಜಾರಿಗೊಳಿಸಬೇಕು. ಈ ಪಕ್ಷಿಗಳ ಆವಾಸಸ್ಥಾನಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲ ಸಿವಿಲ್ ಕಾಮಗಾರಿ ತಕ್ಷಣವೇ ನಿಷೇಧಿಸಬೇಕು. ಹೆಬ್ಬಾಕ ಆವಾಸಸ್ಥಾನಗಳು ಮತ್ತು ಅವುಗಳ ಸುತ್ತಮುತ್ತಲಿನ ಹುಲ್ಲುಗಾವಲುಗಳ ಒತ್ತುವರಿಯನ್ನು ನಿಷೇಧಿಸಬೇಕು ಎಂದು ಸರ್ಕಾರಕ್ಕೆ ನರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka Latest News Live: ಹಳ್ಳಿಗುಗ್ಗು ಸಾಲ ಮನ್ನಾ ಮಾಡಿದ್ದಾನೆ ಹೊರತು ಲೂಟಿ ಮಾಡಲಿಲ್ಲ: ಎಚ್‌ಡಿಕೆ
ಆಂಧ್ರಕ್ಕೆ ನೆರವು ನೀಡಿದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್‌ಗೆ ಥ್ಯಾಂಕ್ಸ್ ಹೇಳಿದ ಚಂದ್ರಬಾಬು ನಾಯ್ಡು!