Online Money Games Ban: ಆನ್‌ಲೈನ್‌ ಗೇಮಿಂಗ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ, ಆ.30ರಂದು ವಿಚಾರಣೆ

Kannadaprabha News, Ravi Janekal |   | Kannada Prabha
Published : Aug 29, 2025, 06:52 AM IST
Karnataka High Court (Photo/ANI)

ಸಾರಾಂಶ

ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸಿರುವ ಕಾನೂನನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಹೆಡ್‌ ಡಿಜಿಟಲ್‌ ಹೆಡ್‌ ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿರುವ ಈ ಅರ್ಜಿಯ ವಿಚಾರಣೆಯನ್ನು ಆ.30ಕ್ಕೆ ನಿಗದಿಪಡಿಸಲಾಗಿದೆ.

ಬೆಂಗಳೂರು (ಆ.29): ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ರೂಪಿಸಿರುವ ಕಾನೂನು ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಆನ್‌ಲೈನ್‌ ಗೇಮಿಂಗ್‌ ನಿಷೇಧ ಪ್ರಶ್ನಿಸಿ ನ್ಯಾಯಾಲಯದ ಕದತಟ್ಟಿರುವ ಮೊದಲ ಅರ್ಜಿ ಇದಾಗಿದೆ.

ಈ ಕುರಿತಂತೆ ಹೆಡ್‌ ಡಿಜಿಟಲ್‌ ಹೆಡ್‌ ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ವಿದ್ಯುನ್ಮಾನ, ಮಾಹಿತಿ ಮತ್ತು ತಾಂತ್ರಿಕ ಸಚಿವಾಲಯವನ್ನು ಅರ್ಜಿಯಲ್ಲಿ ಪ್ರತಿವಾದಿ ಮಾಡಲಾಗಿದೆ.

ಗುರುವಾರ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರ ಪೀಠದ ಮುಂದೆ ಹಾಜರಾಗಿ, ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಪೀಠ, ಅರ್ಜಿಯನ್ನು ಆ.30ರಂದು ವಿಚಾರಣೆಗೆ ನಿಗದಿಪಡಿಸಲು ಕಚೇರಿಗೆ ನಿರ್ದೇಶಿಸಿತು.

New Delhi-based company files petition in Karnataka High Court against banning even games of skill under online gaming Act; hearing likely on August 30

ದೇಶದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳನ್ನು ನಿರ್ಬಂಧಿಸಲು ‘ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ-2025’ ಅನ್ನು ಸಂಸತ್ತಿನ ಉಭಯ ಸದನದಲ್ಲಿ ಆ.21ರಂದು ಅಂಗೀಕರಿಸಿದ ನಂತರ ಮಸೂದೆಗೆ ಆ.22ರಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಇದರಿಂದ ದೇಶದಲ್ಲಿ ಆನ್‌ಲೈನ್‌ ಗೇಮಿಂಗ್‌ಗೆ ಕಡಿವಾಣ ಬಿದ್ದಿದೆ. ಈ ಕಾನೂನನ್ನು ಪ್ರಶ್ನಿಸಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್