
ಬೆಂಗಳೂರು (ಜೂನ್ 8): ರಾಜ್ಯದಲ್ಲಿ ನಾಳೆಯಿಂದ ಮುಂಗಾರು ಚುರುಕು ಪಡೆಯಲಿದ್ದು, ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದ 13ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಯಲ್ಲೋ ಅಲರ್ಟ್ ಜಿಲ್ಲೆಗಳ ವಿವರ ಇಲ್ಲಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ನಾಳೆಯಿಂದಲೇ ಮುಂಗಾರು ಮಳೆಯ ಅಬ್ಬರ ಶುರುವಾಗಲಿದೆ. ರಾಜ್ಯದ ಕರಾವಳಿ ಭಾಗ, ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕೆಲವು ಕಡೆ ಸಾಧಾರಣ ಮತ್ತು ಉತ್ತಮ ಮಳೆಯಾಗಲಿದೆ. ಇನ್ನು ಜೂನ್ 11ರಂದು ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಅದೇ ರೀತಿ ಜೂನ್ 12ರಂದು ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಬಾಲಕೋಟೆ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಕೂಡಾ ಎಲ್ಲೋ ಅಲರ್ಟ್ ನೀಡಲಾಗಿದೆ.
ಇದು ಮುಂಗಾರು ಮಾರುತಗಳ ಭಾರೀ ಚಲನೆಯ ಪ್ರಭಾವದಿಂದಾಗಿ ತೀವ್ರ ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ. ಹವಾಮಾನ ಇಲಾಖೆ ಅನಾಹುತಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಇನ್ನು ಮಳೆಯ ಸಂದರ್ಭದಲ್ಲಿ ಹಳ್ಳಗಳನ್ನು ದಾಟಿ ಹೋಗಿ ನೀರು ಬರುವಾಗ ದಾಟುವ ಪ್ರಯತ್ನ ಮಾಡಬಾರದು. ನದಿ ಮತ್ತು ಹಳ್ಳಗಳ ನಡುಗಡ್ಡೆಗಳನ್ನು ಪ್ರವೇಶ ಮಾಡದಂತೆ ಹವಾಮಾನ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಜಂಟಿಯಾಗಿ ಎಚ್ಚರಿಕೆ ನೀಡಿವೆ.
ಜಿಲ್ಲಾವಾರು ಮುನ್ಸೂಚನೆ:
ಸಾರ್ವಜನಿಕರ ಗಮನಕ್ಕೆ:
ಹವಾಮಾನ ಇಲಾಖೆ ಈ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸಾರ್ವಜನಿಕರಿಗೆ ವಿನಂತಿಸಿದೆ. ರೈತರು ಕೂಡಾ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಅನುಕೂಲವಾಗುವಂತೆ ಈ ಮಾಹಿತಿ ಆಧಾರಿತ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸೂಕ್ತ.
ಕೊಡಗು ಜಿಲ್ಲೆಯ ಜನತೆಗೆ ಸ್ಥಳಾಂತರಕ್ಕೆ ನಗರಸಭೆ ಸೂಚನೆ:
ರಾಜ್ಯದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲಿ 2018 ರಿಂದ ನಿರಂತರವಾಗಿ 3-4 ವರ್ಷಗಳ ಕಾಲ ಭೂಕುಸಿತವಾಗಿದೆ. ಈ ವರ್ಷವೂ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂಬ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಮಡಿಕೇರಿ ನಗರಸಭೆ ಅಪಾಯಕಾರಿ ಪರಿಸ್ಥಿತಿ ಇರುವ ನಗರದ ಹಲವು ಬಡಾವಣೆಗಳ 200ಕ್ಕೂ ಹೆಚ್ಚು ಕುಟುಂಬಗಳು ತೀವ್ರ ಮಳೆಯ ಸಂದರ್ಭ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಿ ಎಂದು ನೋಟಿಸ್ ನೀಡಿದೆ. ಅಲ್ಲದೆ ಮಡಿಕೇರಿ ನಗರದ ಹಲವೆಡೆ ಕಾಳಜಿ ಕೇಂದ್ರವನ್ನು ತೆರೆಯಲು ನಗರಸಭೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ನಗರಸಭೆ ನೋಟೀಸ್ ನೀಡಿರುವುದನ್ನು ನೋಡಿದರೆ 2018 ರಂತೆಯೇ ಈ ಬಾರಿಯೂ ಮಡಿಕೇರಿ ನಗರದ ಹಲವು ಬಡಾವಣೆಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿನಾ ಎನ್ನುವ ಅನುಮಾನ ದಟ್ಟವಾಗುತ್ತಿದೆ. ಮಡಿಕೇರಿ ನಗರಸಭೆಯ ವ್ಯಾಪ್ತಿಯ ಇಂದಿರಾ ನಗರ, ಚಾಮುಂಡೇಶ್ವರಿ ನಗರಿ, ಮಂಗಳಾದೇವಿ ನಗರ, ಮಲ್ಲಿಕಾರ್ಜುನನಗರ, ತ್ಯಾಗರಾಜ ಕಾಲೋನಿ ಸೇರಿದಂತೆ ಹಲವು ಬಡಾವಣೆಗಳು ಅತೀ ಹೆಚ್ಚಿನ ಬೆಟ್ಟ ಪ್ರದೇಶದಿಂದ ಕೂಡಿವೆ. ಈ ಬಡಾವಣೆಗಳಲ್ಲಿರುವ ಬಹುತೇಕ ಮನೆಗಳು ಅಪಾಯದಲ್ಲಿ ಇವೆ ಎಂದು ಮಡಿಕೇರಿ ನಗರಸಭೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವರಿಗೆ ಈಗಾಗಲೇ ನೋಟಿಸ್ ಅವನ್ನು ನೀಡಿರುವ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ