ಓಡಿಸ್ಸಾ ಕರಾವಳಿಯ ಸೈಕ್ಲೋನ್‌ನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಾಳೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಏಪ್ರಿಲ್ 6ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು (ಮಾ.31): ಓಡಿಸ್ಸಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದಾಗಿ ರಾಜ್ಯಾದ್ಯಂತ ಈಗಾಗಲೇ ಕರಾವಳಿ ಪ್ರದೇಶ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಾಳೆ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಿಸಿಲಿನ ಬೇಗೆ ಮಧ್ಯೆ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಈ ಜಿಲ್ಲೆಗಳ ಜನರು ಸಂಜೆ ವೇಳೆಗೆ ಅಪಾಯಕಾರಿ ಹಳ್ಳದ ತೀರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಳೆ ಯಲ್ಲೋ ಅಲರ್ಟ್ ನೀಡಲಾದ ಜಿಲ್ಲೆಗಳು:
ವಿಜಯನಗರ
ತುಮಕೂರು
ಶಿವಮೊಗ್ಗ
ರಾಮನಗರ
ಮೈಸೂರು
ಮಂಡ್ಯ
ಕೋಲಾರ
ಕೊಡಗು
ಹಾಸನ
ದಾವಣಗೆರೆ
ಚಿತ್ರದುರ್ಗ
ಚಿಕ್ಕಮಗಳೂರು
ಚಿಕ್ಕಬಳ್ಳಾಪುರ
ಚಾಮರಾಜನಗರ
ಬೆಂಗಳೂರು ನಗರ
ಬೆಂಗಳೂರು ಗ್ರಾಮಾಂತರ
ಹಾವೇರಿ
ಗದಗ
ಧಾರವಾಡ
ಬೆಳಗಾವಿ
ಬಾಗಲಕೋಟೆ
ಉತ್ತರ ಕನ್ನಡ
ದಕ್ಷಿಣ ಕನ್ನಡ
ಉಡುಪಿ
ವಿಜಯಪುರ
ಇದನ್ನೂ ಓದಿ:
ಮುಂದಿನ 6 ದಿನಗಳ ಕಾಲ ಮಳೆ ಮುನ್ಸೂಚನೆ:
ಏ. 2ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ದಕ್ಷಿಣ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾವೇರಿ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಮತ್ತು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಏಪ್ರಿಲ್ 3ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳು ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಏಪ್ರಿಲ್ 4ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್ ಜಿಲ್ಲೆಯಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಬೆಂಗಳೂರು 180 ಅಡಿ ಆಳದಲ್ಲಿ 16 ಕಿ.ಮೀ ಸುರಂಗ ಮಾರ್ಗ; 5 ವರ್ಷದಲ್ಲಿ ನಿರ್ಮಾಣ, 30 ವರ್ಷ ಟೋಲ್ ಸಂಗ್ರಹ!
ಏಪ್ರಿಲ್ 5ರಂದು ಕರಾವಳಿ ಕರ್ನಾಟಕ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.
ಏಪ್ರಿಲ್ 6ರಂದು ಕರಾವಳಿ ಕರ್ನಾಟಕ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮೈಸೂರು, ಮಡಿಕೇರಿ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ದಕ್ಷಿಣ ಕರ್ನಾಟಕದ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.