Mosque loudspeaker; ಯಾವ ಕಾನೂನಿನಡಿ ಮಸೀದಿಯಲ್ಲಿ ಧ್ವನಿವರ್ಧಕಕ್ಕೆ ಅವಕಾಶ? ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌!

Published : Nov 17, 2021, 06:49 AM IST
Mosque loudspeaker; ಯಾವ ಕಾನೂನಿನಡಿ ಮಸೀದಿಯಲ್ಲಿ ಧ್ವನಿವರ್ಧಕಕ್ಕೆ ಅವಕಾಶ? ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌!

ಸಾರಾಂಶ

ಮಸೀದಿ ಧ್ವನಿವರ್ಧಕದಿಂದ ಶಬ್ದ ಮಾಲಿನ್ಯ ಹೆಚ್ಚಳ ಅರ್ಜಿ ವಿಚಾರಣೆ ನಡೆಸಿ ರಾಜ್ಯ ಸರ್ಕಾರ ಪ್ರಶ್ನಿಸಿದ ಹೈಕೋರ್ಟ್ ಶಬ್ದ ಮಾಲಿನ್ಯವಾಗುತ್ತಿರುವ ಧ್ವನಿ ವರ್ಧಕ ಬಳಸಲು ಅವಕಾಶ ನೀಡಿದ್ದು ಹೇಗೆ? ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮ ಏನು ಕೇಳಿದ ಕೋರ್ಟ್

ಬೆಂಗಳೂರು(ನ.17):  ಮಸೀದಿಗಳಲ್ಲಿ(mosques) ಧ್ವನಿವರ್ಧಕಗಳನ್ನು ಅಳವಡಿಸಲು ಯಾವ ಕಾನೂನಿನಡಿ ಅವಕಾಶ ಮಾಡಿಕೊಡಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಮತ್ತೊಮ್ಮೆ ಸೂಚಿಸಿದೆ. ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನಗರದಲ್ಲಿ ಮಸೀದಿಗಳು ಧ್ವನಿವರ್ಧಕ(loudspeakers) ಬಳಸಿ ಶಬ್ದ ಮಾಲಿನ್ಯ ಉಂಟಾಗುತ್ತಿರುವ ವಿಚಾರವಾಗಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು. ಅಲ್ಲದೆ, ಧ್ವನಿವರ್ಧಕಗಳಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯವನ್ನು ತಡೆಯಬೇಕು. ಧ್ವನಿವರ್ಧಕಗಳನ್ನು ನಿರಂತರವಾಗಿ ಶಾಶ್ವತವಾಗಿ ಬಳಸಲು ಅವಕಾಶ ಕೊಡಬಾರದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಜತೆಗೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ನಗರದ ವಿವಿಧ 15 ಮಸೀದಿಗಳು ಧ್ವನಿವರ್ಧಕಗಳನ್ನು ಬಳಸಲು ಯಾವ ಕಾನೂನಿನ ಅಡಿ ಅವಕಾಶ ಮಾಡಿಕೊಡಲಾಗಿದೆ ಎಂದು ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿತು.

ಕರ್ನಾಟಕದಲ್ಲಿ ಶಬ್ದ ಮಾಲಿನ್ಯ(noise pollution) ಪರಿಣಾಮವಾಗಿ ನಿಯಂತ್ರಿಸಲು ರಾಜ್ಯದಲ್ಲಿ ಮಸೀದಿಗಳಲ್ಲಿ ಉಪಯೋಗಿಸುತ್ತಿರುವ ಧ್ವನಿವರ್ಧಕಕಗಳನ್ನು ನಿಷೇಧಿಸಬೇಕು ಎಂದು ಕೋರಿ ಥಣಿಸಂದ್ರ ಸುತ್ತಮುತ್ತಲಿನ ನಿವಾಸಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇದೀಗ ರಾಜ್ಯ ಸರ್ಕಾವನ್ನು ಪ್ರಶ್ನಿಸಿದೆ. 

'ಅಜಾನ್‌ನಿಂದ ದಿನಾ ನಿದ್ರೆ ಭಂಗ, ತಲೆನೋವು' ಧ್ವನಿವರ್ಧಕ ಬ್ಯಾನ್

ಮಸೀದಿಗಳು ಧ್ವನಿವರ್ಧಕ ಬಳಕೆಗೆ ಅಧಿಕೃತ ಅದೇಶ ಅಥವಾ ಕಾನುನಿಲ್ಲ. ವಕ್ಫ್ ಬೋರ್ಡ್ ಅನುಮತಿ ಪಡೆದು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಕೆ ಮಾಡುತ್ತಿದ್ದಾರೆ. ಆದರೆ ವಕ್ಫ್ ಮಂಡಳಿಗೆ ಈ ರೀತಿಯ ಅನುಮತಿ ನೀಡುವ ಅಥವಾ ಅದೇಶ ಹೊರಡಿಸುವ ಯಾವುದೇ ಅಧಿಕಾರವಿಲ್ಲ. ಹೀಗಿದ್ದರೂ ರಾಜಾರೋಷವಾಗಿ ಶಬ್ದಮಾಲಿನ್ಯಕ್ಕೆ ಮೂಲ ಕಾರಣವಾಗುತ್ತಿರುವ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಶ್ರೀಧರ್ ಪ್ರಭು ವಾದ ಮಂಡಿಸಿದರು.

ಧ್ವನಿವರ್ಧಕ ಬಳಸಲು ಕಾನೂನುಗಳಿವೆ. ಧಾರ್ಮಿಕ, ಸಾಂಸ್ಕೃತಿಕ, ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕ ಬಳಸಲು ಅನುಮತಿ ಇದೆ. ಆದರೆ 15 ದಿನ ಮೀರುವಂತಿಲ್ಲ. ಶಬ್ದ ಮಾಲಿನ್ಯ ನಿಯಂತ್ರಣ ನಿಯಮದ ಪ್ರಕಾರ ಶಾಶ್ವತವಾಗಿ ಧ್ವನಿವರ್ಧಕ ಬಳಸಲು ರಾಜ್ಯದಲ್ಲಿ ಅವಕಾಶವಿಲ್ಲ. ಹೀಗಾಗಿ ಮಸೀದಿಗಳಲ್ಲಿ ಬಳಸುತ್ತಿರುವ ಧ್ವನಿವರ್ಧಕಗಳು ಕಾನೂನು ಉಲ್ಲಂಘನೆಯಾಗಿದೆ ಎಂದು ಶೀಧ್ರರ್ ಪ್ರಭು ಹೇಳಿದ್ದಾರೆ. 

ಇತ್ತ ಮಸೀದಿಗಳ ಪರ ವಾದ ಮಂಡಿಸಿದ ವಕೀಲರು ಸ್ಥಳೀಯ ಪೊಲೀಸ್ ಠಾಣೆಯಿಂದ ಅನುಮತಿ ಪತ್ರ ಪಡೆದು ಧ್ವನಿವರ್ಧಕ ಬಳಸಲಾಗಿದೆ. ಮಸೀದಿಗಳು ಬಳಸುತ್ತಿರುವ ಧ್ವನಿವರ್ಧಕಗಳು ಅತೀಯಾದ ಶಬ್ದವಿಲ್ಲ. ಇದರಿಂದ ಶಬ್ದ ಮಾಲಿನ್ಯವಾಗುತ್ತಿಲ್ಲ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಯಾವುದೇ ಮಸೀದಿ ಧ್ವನಿವರ್ಧಕ ಬಳಸುತ್ತಿಲ್ಲ ಎಂದು ವಾದ ಮಂಡಿಸಿದರು. 

ಅಝಾನ್‌ಗೆ ಮೈಕ್ ಅಥವಾ ಸ್ಪೀಕರ್ ಬಳಸಬಾರದು; ಯುಪಿ ಹೈಕೋರ್ಟ್ ಆದೇಶ!

ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳು ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಬಳಸುವ ಮೂಲಕ ಶಬ್ದ ಮಾಲಿನ್ಯ ಉಂಟು ಮಾಡುತ್ತಿರುವುದನ್ನು ತಡೆಯಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಪೊಲೀಸ್‌ ಇಲಾಖೆಗೆ ಹೈಕೋರ್ಟ್‌ ಇದೇ ವೇಳೆ ನಿರ್ದೇಶಿಸಿದೆ.

ರಸ್ತೆಯಲ್ಲಿ ನಿಂತರೆ ವಾಹನಗಳ ಕರ್ಕಶ ಶಬ್ದ ಯಾವ ಮಟ್ಟಿಗೆ ಇದೆ ಎಂದು ಅರ್ಥವಾಗಲಿದೆ. ಶಬ್ದ ಮಾಲಿನ್ಯ ಕೂಡ ಗಂಭೀರವಾದ ಸಮಸ್ಯೆ ಅನ್ನೋದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಅತೀ ಹೆಚ್ಚು ಶಬ್ದ ಹೊರಸೂಸುವ ವಾಹನ, ಹೆಚ್ಚಿನ ಶಬ್ದಕ್ಕಾಗಿ ವಾಹನದಲ್ಲಿ ಮಾರ್ಪಾಡು ಮಾಡಿರುವ ಕುರಿತು ಪೊಲೀಸ್ ಇಲಾಖೆ ಪರಿಶೀಲನೆ ನಡೆಸಲು ಸೂಚಿಸಬೇಕು. ರಾಜ್ಯ ಪೊಲೀಸ್ ಇಲಾಖೆ ವಾಹನಗಳ ಶಬ್ದ ಮಿತಿ ಮೀರದಂತೆ ನೋಡಿಕೊಳ್ಳುವ ಜವಾಬ್ದಾರಿ ವಹಿಸಿ ಎಂದು ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!