ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್, ಕನ್ನಡಿಗರ ಕೂಗಿಗೆ ಕೊನೆಗೂ ಸ್ಪಂದನೆ

Published : Dec 13, 2024, 07:59 AM IST
ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್, ಕನ್ನಡಿಗರ ಕೂಗಿಗೆ ಕೊನೆಗೂ ಸ್ಪಂದನೆ

ಸಾರಾಂಶ

ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಭಾಗೀಯ ಪೀಠವೊಂದು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು, ಕನ್ನಡದಲ್ಲಿಯೇ ತೀರ್ಪು ನೀಡಬೇಕು ಎಂಬ ಬಹು ವರ್ಷಗಳ ಕೂಗಿಗೆ ನಾಂದಿ ಹಾಡಿದೆ.

ಬೆಂಗಳೂರು (ಡಿ.13): ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಭಾಗೀಯ ಪೀಠವೊಂದು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು, ಕನ್ನಡದಲ್ಲಿಯೇ ತೀರ್ಪು ನೀಡಬೇಕು ಎಂಬ ಬಹು ವರ್ಷಗಳ ಕೂಗಿಗೆ ನಾಂದಿ ಹಾಡಿದೆ.

ಭಾರತ ಭಾಷಾ ದಿನದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಕೃಷ್ಣಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಪ್ರಕರಣವೊಂದರ ತೀರ್ಪನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ಬರೆಸಿದೆ. ಅಲ್ಲದೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು, ತೀರ್ಪಿನ ಆಪರೇಟಿವ್ (ತೀರ್ಪಿನ ಸಾರಾಂಶದ) ಭಾಗವನ್ನು ಕನ್ನಡದಲ್ಲಿ ಓದುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ.

ಮದರಸದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರಿಬ್ಬರ ಬಲತ್ಕಾರ ಪ್ರಕರಣ; ಕೇಸ್ ರದ್ದುಗೊಳಿಸಲು ಹೈಕೊರ್ಟ್‌ ನಿರಾಕರಣೆ

ನ್ಯಾಯಾಲಯದ ತೀರ್ಪುಗಳು ಸಾಮಾನ್ಯ ಜನರಿಗೆ ಅರ್ಥವಾಗಬೇಕು. ಇಂಗ್ಲಿಷ್ ಅಥವಾ ಅವರಿಗೆ ತಿಳಿಯದ ಭಾಷೆ ಯಲ್ಲಿ ಹೇಳಿದರೆ ಆಗದು. ತೀರ್ಪು ನೀಡುವುದಕ್ಕೆ ನಮೂದಿಸಲಾಗಿರುವ ಕಾರಣಗಳು ಅಥವಾ ಅದರಲ್ಲಿ ನಡೆಸಿರುವ ಸಾಂವಿಧಾನಿಕ ನಿಯಮಗಳ ಚರ್ಚೆಗಳನ್ನು ಕನ್ನಡದಲ್ಲಿ ಬರೆಯಲಾಗದಿದ್ದರೂ ಕೊನೇ ಪಕ್ಷ ತೀರ್ಪಿನ ಆಪರೇಟಿವ್ ಭಾಗವನ್ನಾದರೂ ಕನ್ನಡದ ಲ್ಲಿಯೇ ಬರೆಯಬೇಕು. ಇದರಿಂದ ಸಾಮಾನ್ಯ ಜನರಿಗೆ ಹಾಗೂ ದಾವೆದಾರನಿಗೆ ತೀರ್ಪು ಏನೆಂದು ಅರ್ಥವಾಗುತ್ತದೆ.

ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು ಎಂದು ಈವೇಳೆನ್ಯಾ.ದೀಕ್ಷಿತ್ ಪ್ರತಿಪಾದಿಸಿದರು.

ತುಮಕೂರಿನ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ (ವರ್ಸಸ್ ಎಸ್.ಲಿಂಗಣ್ಣ ಮತ್ತು ಇತರರು) ಅವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು (ಒರಿಜನಲ್ ಸೈಡ್ ಅಪೀಲ್) ಪುರಸ್ಕರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಆ ತೀರ್ಪನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಕಟಿಸಿದೆ.

ಮದುವೆಗೆ ಒಪ್ಪಂದ ಆಂಟಿಯನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಈ ಮಧ್ಯೆ ವಿಭಾಗೀಯ ಪೀಠವನ್ನು ಹಂಚಿಕೊಂಡಿದ್ದ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರು ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ಸಹ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಆಯಾ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಅನುವಾದ ಮಾಡಬೇಕು ಎಂದು ಹೇಳಿದೆ. ಅದರಂತೆ ಸುಪ್ರೀಂ ಕೋರ್ಟ್‌ನ 2,400 ತೀರ್ಪುಗಳು ಸದ್ಯ ಕನ್ನಡಕ್ಕೆ (ಹೈಕೋರ್ಟ್) ಅನುವಾದ ಮಾಡಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!