ನಾಡಗೀತೆ ವಿಚಾರದಲ್ಲಿ ಸರ್ಕಾರಕ್ಕೆ ಜಯ, ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published : Apr 24, 2024, 07:38 PM ISTUpdated : Apr 24, 2024, 07:50 PM IST
ನಾಡಗೀತೆ ವಿಚಾರದಲ್ಲಿ ಸರ್ಕಾರಕ್ಕೆ ಜಯ, ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಸಾರಾಂಶ

ರಾಜ್ಯದಲ್ಲಿ ಮೈಸೂರು ಅನಂತಸ್ವಾಮಿ ಅವರು ರಚಿಸಿದ ಧಾಟಿಯಲ್ಲಿಯೇ ನಾಡಗೀತೆ ಹಾಡಬೇಕು ಎಂಬ ಸರ್ಕಾರಿ ಆದೇಶವನ್ನು ಎತ್ತಿ ಹಿಡಿಯವ ಮೂಲಕ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಕೆ ಮಾಡಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಬೆಂಗಳೂರು (ಏ.24); ರಾಜ್ಯದಲ್ಲಿ ಇನ್ನುಮುಂದೆ ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ಹಾಡುಬೇಕು ಎಂದು ರಾಜ್ಯ ಸರ್ಕಾರದಿಂದ ಕಡ್ಡಾಯಗೊಳಿಸಲಾಗಿತ್ತು. ಆದರೆ, ಇದನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜೈ ಭಾರತ ಜನನಿಯ ತನುಜಾತೆ, ಜಉ ಏ ಕರ್ನಾಟಕ ಮಾತೆ... ನಾಡಗೀತೆಯ ಮ್ಯೂಸಿಕ್ ಟ್ಯೂನ್ ವಿವಾದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್  ಎತ್ತಿಹಿಡಿದಿದೆ. ಈ ಹಿಂದೆ ರಾಜ್ಯ ಸರ್ಕಾರದಿಂದ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್‌ ಮೊರೆ ಹೋಗಿದ್ದರು.

ನಾಡಗೀತೆಗೆ ಧಾಟಿ ನಿಗದಿ ಅಧಿಕಾರ ನಿಮಗಿದ್ಯಾ?: ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಕೆ ಮಾಡಿದ್ದ ತಕರಾರು ಅರ್ಜಿಯನ್ನು ವಿಚಾರನೆ ಮಾಡಿದ ಹೈಕೋರ್ಟ್‌ ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸರ್ಕಾರಕ್ಕೆ ಶಿಕ್ಷಣ ಕಾಯ್ದೆಯಡಿ ಅಧಿಕಾರವಿದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮೂಲಕ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ  ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ನಾಡಗೀತೆಯ ಧಾಟಿ ಕಡ್ಡಾಯಗೊಳಿಸಲು ಶಾಸನಾತ್ಮಕವಾಗಿ ಅಧಿಕಾರ ಇದೆಯೇ? 
ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2023ರ ಸೆ.25 ರಂದು ಹೊರಡಿಸಿದ ಬಗ್ಗೆ ನ್ಯಾಯಾಲಯ ಸ್ಪಷ್ಟೀಕರಣ ಆಲಿಸಿತ್ತು. ಬಳಿಕ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾಡಗೀತೆಯನ್ನು ನಿರ್ದಿಷ್ಟ ರಾಗದಲ್ಲಿ ಹಾಡುವುದನ್ನು ಕಡ್ಡಾಯ ಮಾಡಿ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಯಾವುದೇ ಶಾಸನವಿಲ್ಲ ಎಂಬುದಾಗಿ ಅರ್ಜಿದಾರರ ಕಿಕ್ಕೇರಿ ಕೃಷ್ಣಮೂರ್ತಿ ಅವರು ಆಕ್ಷೇಪಿಸಿದ್ದರು. ಹಾಗಾದರೆ, ಇಂತಹ ಆದೇಶ ಹೊರಡಿಸಲು ಸರ್ಕಾರ ಯಾವ ಶಾಸನಾತ್ಮಕ ಅಧಿಕಾರ ಹೊಂದಿದೆ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ವಕೀಲರು ರಾಜ್ಯ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ವಿವರಣೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯಗೊಳಿಸಿದ ಸರ್ಕಾರ; ತಿದ್ದುಪಡಿ ಆದೇಶದಲ್ಲಿ ಯೂಟರ್ನ್!

ಇಂದು ನಾಡಗೀತೆ ಸಾಂವಿಧಾನಿಕವಾಗಿ ಅತ್ಯಂತ ಸೂಕ್ತ ವಿಚಾರವಾಗಿದೆ. ನಾಡಗೀತೆ ವಿಚಾರದಲ್ಲಿ ರಾಜ್ಯ ಸರ್ಕಾರ ಏಕೆ ಹೀಗೆ ಗೊಂದಲ ಆದೇಶಗಳನ್ನು ಹೊರಡಿಸುತ್ತಿದೆ? ಒಂದು ಆದೇಶ ಹೊರಡಿಸಿ ನಂತರ ಅದನ್ನು ಹಿಂಪಡೆದು ತಿದ್ದುಪಡಿ ಆದೇಶ ಹೊರಡಿಸುತ್ತಿದೆ. ಇನ್ನೂ ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸಂವಿಧಾನದ ಅಥವಾ ಇತರೆ ಶಾಸನದ ಬೆಂಬಲವಿರಬೇಕು. ಸರ್ಕಾರ ವಿವೇಚನಾಧಿಕಾರ ಬಳಸಿ ಕಾರ್ಯಕಾರಿ ಆದೇಶ ಹೊರಡಿಸಲಾಗದು ಎಂದು ವಿಚಾರಣೆ ಮುಂದೂಡಿತ್ತು. ಈಗ ಸರ್ಕಾರದಿಂದ ಶಿಕ್ಷಣ ಕಾಯ್ದೆಯಡಿ ನಾಡಗೀತೆಯ ಧಾಟಿ ಕಡ್ಡಾಯಗೊಳಿಸಲು ಅವಕಾಶವಿದೆ ಎಂದು ಸರ್ಕಾರದಿಂದ ಸ್ಪಷ್ಟೀಕರಣ ನೀಡಿದ ಹಿನ್ನೆಲೆಯಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಾಮರಾಜನಗರ: ಪಾದಯಾತ್ರೆಗೆ ಹೋರಟಿದ್ದವರ ಮೇಲೆ ಚಿರತೆ ಅಟ್ಯಾಕ್, ಮಾದಪ್ಪ ಭಕ್ತ ಸಾವು!
ಹಾಸನದಲ್ಲೇ ಹಾಡ ಹಗಲೇ ಬೆಚ್ಚಿ ಬೀಳಿಸುವ ಘಟನೆ: ಶಾಲಾ ಬಾಲಕಿಯ ಬೆನ್ನಟ್ಟಿಕೊಂಡು ಮನೆ ಬಾಗಿಲವರೆಗೂ ಬಂದ ಅಪರಿಚಿತ