ಚುನಾವಣೆ ಪ್ರಚಾರದಲ್ಲಿ ನಗದು ಪತ್ತೆ: ಮಾಯಾವತಿ ವಿರುದ್ಧದ ಕಲಬುರಗಿ ಕೇಸ್‌ ರದ್ದು

Kannadaprabha News   | Asianet News
Published : Feb 26, 2022, 06:57 AM IST
ಚುನಾವಣೆ ಪ್ರಚಾರದಲ್ಲಿ ನಗದು ಪತ್ತೆ: ಮಾಯಾವತಿ ವಿರುದ್ಧದ ಕಲಬುರಗಿ ಕೇಸ್‌ ರದ್ದು

ಸಾರಾಂಶ

*  2013ರ ಚುನಾವಣೆ ವೇಳೆ 1.5 ಲಕ್ಷ ರು. ಸಿಕ್ಕ ಪ್ರಕರಣ *  ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌ *  ಅರ್ಜಿದಾರರು ನೀಡಿದ ವಿವರಣೆ ಒಪ್ಪಿದ ಕೇಂದ್ರ ಚುನಾವಣಾ ಆಯೋಗ  

ಬೆಂಗಳೂರು(ಫೆ.26):  2013ರ ವಿಧಾನಸಭಾ ಚುನಾವಣೆಗೆ(2013 Assembly Elections) ಕಲಬುರಗಿಯಲ್ಲಿ(Kalaburagi) ಪ್ರಚಾರದ ನಡೆಸುತ್ತಿದ್ದ ವೇಳೆ ನಗದು ಪತ್ತೆಯಾಗಿದ್ದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ(Mayawati) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌(High Court) ರದ್ದುಗೊಳಿಸಿದೆ.

ಪ್ರಕರಣ ರದ್ದು ಕೋರಿ ಮಾಯಾವತಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯಪೀಠ, ನಗದು ಪತ್ತೆ ವಿಚಾರ ಸಂಬಂಧ ಅರ್ಜಿದಾರರು ನೀಡಿದ ವಿವರಣೆಯನ್ನು ಕೇಂದ್ರ ಚುನಾವಣಾ ಆಯೋಗ(Central Election Commission) ಒಪ್ಪಿದೆ. ಹಾಗಾಗಿ ನ್ಯಾಯದ ದೃಷ್ಟಿಯಿಂದ ಪ್ರಕರಣ ಮುಂದುವರಿಸುವುದು ಸರಿಯಲ್ಲ. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಮತ್ತು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಆದೇಶ ನೀಡಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಪ್ರಮೀಳಾ ನೇಸರ್ಗಿ ವಾದ ಮಂಡಿಸಿದ್ದರು.

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

2013ರ ಏ.30ರಂದು ಮಾಯಾವತಿ ಕಲಬುರಗಿಯ ಜೇವರ್ಗಿಗೆ ಚುನಾವಣಾ ಪ್ರಚಾರಕ್ಕೆ(Election Campaign) ಆಗಮಿಸಿದ್ದರು. ಆಗ ಚುನಾವಣಾ ವೀಕ್ಷಕರ ತಂಡ ಪರಿಶೀಲನೆ ನಡೆಸಿದಾಗ 1,50,000 ರು. ನಗದು ಪತ್ತೆಯಾಗಿತ್ತು. ಆಗ ಮಾಯಾವತಿ ತಮ್ಮ ಹಣ 50,000 ರು. ಉಳಿದ 1,00,000 ರು. ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್‌ ಚಂದ್ರ ಮಿಶ್ರ ಅವರಿಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಅದನ್ನು ಆಯೋಗ ಒಪ್ಪಿತ್ತು. ಆದರೂ ಅವರ ವಿರುದ್ಧ ಜೇವರ್ಗಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮುಂದುವರಿಸಲಾಗಿತ್ತು. ಜತೆಗೆ, ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಅದನ್ನು ಪ್ರಶ್ನಿಸಿ ಮಾಯಾವತಿ ನ್ಯಾಯಾಲಯದ ಮೊರೆ ಹೋಗಿದ್ದರು.

ಚುನಾವಣೆ ಮಧ್ಯೆ ಅಮಿತ್ ಶಾ ಹೊಗಳಿ ಊಹಾಪೋಹಗಳಿಗೆ ಮತ್ತಷ್ಟು ಬಲ ತುಂಬಿದ ಮಾಯಾವತಿ!

ಲಕ್ನೋ: ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ(UP Election) ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು 2007 ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ. ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಬಿಎಸ್‌ಪಿಯ(BSP) ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು ಉಲ್ಲೇಖಿಸಿದ್ದ ಅಮಿತ್ ಶಾ ಅವರನ್ನುದ್ದೇಶಿಸಿ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಹೊಗಳಿದ್ದಾರೆ. 

UP Elections 2022: ಮಾಯಾವತಿ ಗೆ "ಪ್ಲಸ್" ನದ್ದೇ ಸಮಸ್ಯೆ!

ವಾಸ್ತವವಾಗಿ ಮಾಯಾವತಿ ಅವರು ಮತ ಚಲಾಯಿಸಿದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಹ್ಯಾಂಡಲ್‌ನಿಂದ ಪತ್ರಿಕಾ ಪ್ರಕಟಣೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 7 ಗಂಟೆಗೆ ಬಿಎಸ್‌ಪಿ ಮುಖ್ಯಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದೂ ಹೇಳಲಾಗಿದೆ. ಈ ನಡುವೆ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ್ದಾರೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಬಿಎಸ್‌ಪಿ ಕೂಡ ಚುನಾವಣೆಯಲ್ಲಿ ಪ್ರಬಲವಾಗಿ ಹೋರಾಡುತ್ತಿದೆ. ದಲಿತರು ಮತ್ತು ಮುಸ್ಲಿಮರ ಮತಗಳನ್ನು ಹೆಚ್ಚು ಪಡೆಯುತ್ತಿದೆ ಎಂಬ ಬಗ್ಗೆ ಪ್ರಶ್ನಿಸಲಾಗಿದೆ. 

ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಯಾವತಿ, ಅವರು ನೆಲದ ವಾಸ್ತವತೆಯನ್ನು ಒಪ್ಪಿಕೊಂಡಿರುವುದು ಅವರ ಉದಾತ್ತತೆ ಎಂದು ನಾನು ಭಾವಿಸುತ್ತೇನೆ. ಬಿಎಸ್ಪಿ ದಲಿತರು ಮತ್ತು ಮುಸ್ಲಿಮರಿಂದ ಮಾತ್ರವಲ್ಲದೆ ಇಡೀ ಉತ್ತರ ಪ್ರದೇಶದ ಹಿಂದುಳಿದ ವರ್ಗಗಳಿಂದಲೂ ಬೆಂಬಲ ಪಡೆಯುತ್ತಿದೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮೇಲ್ಜಾತಿಯವರೂ ಇದ್ದಾರೆ. ಬಿಎಸ್ಪಿ ಇಡೀ ಸಮಾಜದ ಮತ ಪಡೆಯುತ್ತಿದೆ. ಮಾಯಾವತಿ ಅವರು 2007ರಂತೆಯೇ ಸಂಪೂರ್ಣ ಬಹುಮತದ ಆಧಾರದ ಮೇಲೆ ಖಂಡಿತವಾಗಿಯೂ ತಮ್ಮ ಸರ್ಕಾರವನ್ನು ರಚಿಸುವುದಾಗಿ ಹೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!