ಹಾಸನ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು (ಸೆ.13): ದೇಶದಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್‌ನಿಂದ ಅಸಿಂಧುಗೊಳಿಸಿ ಆದೇಶ ಹೊರಡಿಸಲಾಗಿತ್ತು. ಈಗ ಹೈಕೋರ್ಟ್‌ನ ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಶುಕ್ರವಾರ ಅಥವಾ ಮುಂದಿನ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಗಳನ್ನು ನೀಡಿ ಸ್ಪರ್ಧೆ ಮಾಡಿದ್ದಾರೆ. ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿ ತಮ್ಮನ್ನು ಸಂಸದನಾಗಿ ಘೋಷಣೆ ಮಾಡಬೇಕು ಎಂದು ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತಗೊಂಡ ಅಭ್ಯರ್ಥಿ ಎ.ಮಂಜು ಹಾಗೂ ಬಿಜೆಪಿ ಮುಖಂಡ ದೇವರಾಜಗೌಡ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಚುನಾವಣಾ ಆಯೋಗವು ವರದಿ ಸಲ್ಲಿಸಿದಿತ್ತು. ನ್ಯಾಯಾಲಯ ಮೆಟ್ಟಿಲೇರಿದ ಪ್ರಕರಣವು ಹೈಕೋರ್ಟ್‌ನಲ್ಲಿ ಹಲವು ವಿಚಾರಣೆಗಳು ನಡೆದಿದ್ದವು. ಸೆ.1ರಂದು ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆ ಕೊಟ್ಟಿದ್ದಾರೆಂಬ ಆರೋಪ ಸಾಬೀತಾಗಿದ್ದರಿಂದ ಅವರನ್ನು ಸಂಸದ ಸ್ಥಾನದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು.
ಅಸಿಂಧು ಆದೇಶ ತಡೆಗೂ ಅವಕಾಶ ಕೊಡದ ಹೈಕೋರ್ಟ್: ಇನ್ನು ಹೈಕೋರ್ಟ್‌ನಿಂದ ಸಂಸದ ಸ್ಥಾನ ಅಸಿಂಧುಗೊಂಡ ಪ್ರಜ್ವಲ್ ರೇವಣ್ಣ ತಾವು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ. ಅದಕ್ಕೆ ಕೆಲವು ದಿನಗಳ ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಒಂದು ತಿಂಗಳ ಅವಧಿವರೆಗೆ ಅಸಿಂಧು ಆದೇಶವನ್ನು ಅಮಾನತ್ತಿನಲ್ಲಿಡಬೇಕು ಎಂದು ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಮಾನ್ಯ ಮಾಡದ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆಯನ್ನು ನೀಡದೇ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದರಿಂದ ಪ್ರಜ್ವಲ್ ರೇವಣ್ಣನಿಗೆ ಪುನಃ ಹಿನ್ನಡೆ ಉಂಟಾಗಿತ್ತು.
ಸುಪ್ರೀಂ ಕೋರ್ಟ್‌ಕದ ತಟ್ಟಿದ ಪ್ರಜ್ವಲ್ ರೇವಣ್ಣ: ಹೈಕೋರ್ಟ್‌ನಲ್ಲಿ ತಮಗೆ ಪದೇ ಪದೇ ಸೋಲು ಉಂಟಾಗಿದ್ದರಿಂದ ಅಸಿಂಧುಗೊಂಡ ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದು, ಶುಕ್ರವಾರ ಅಥವಾ ಸೋಮವಾರ ಪ್ರಕರಣ ವಿಚಾರಣೆ ಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇನ್ನು ಹಿರಿಯ ವಕೀಲರಾದ ಮುಕುಲ್ ರೊಹಟಗಿ ಮತ್ತು ವೇಣುಗೋಪಾಲ ಅವರು ಅಸಿಂಧುಗೊಂಡ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ವಾದ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.