ಹೈಕೋರ್ಟ್‌ನಲ್ಲಿ ವಕೀಲರ ಗದ್ದಲ: ಬೇಷರತ್ ಕ್ಷಮಾಪಣೆ ಹಿನ್ನೆಲೆ ಹೈಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ಕೇಸ್ ಕ್ಲೋಸ್, ಏನಿದು ಪ್ರಕರಣ?

Kannadaprabha News   | Kannada Prabha
Published : Nov 24, 2026, 07:53 AM IST
Karnataka High court

ಸಾರಾಂಶ

ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹೈಕೋರ್ಟ್ ಕಲಾಪಕ್ಕೆ ಅಡ್ಡಿಪಡಿಸಿದ ಪ್ರಕರಣವನ್ನು ನ್ಯಾಯಾಲಯ ಮುಕ್ತಾಯಗೊಳಿಸಿದೆ. ಆರೋಪಿ ವಕೀಲರು ಬೇಷರತ್ ಕ್ಷಮಾಪಣೆ ಕೋರಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಈ ನಿರ್ಧಾರ ಕೈಗೊಂಡಿದೆ.

ಬೆಂಗಳೂರು (ನ.24): ರಾಜ್ಯದಲ್ಲಿ ವಕೀಲರ ಮೇಲಿನ ದೌರ್ಜನ್ಯ ಘಟನೆ ಖಂಡಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಕರೆ ನೀಡಿದ್ದ ಪ್ರತಿಭಟನೆಯ ವೇಳೆ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್‌ನಲ್ಲಿ ಗದ್ದಲ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಹೈಕೋರ್ಟ್ ಮುಕ್ತಾಯಗೊಳಿಸಿದೆ.

ಹೈಕೋರ್ಟ್‌ ದಾಖಲಿಸಿಕೊಂಡಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಆರೋಪಿಗಳಾಗಿರುವ ವಕೀಲರು ಬೇಷರತ್ ಕ್ಷಮಾಪಣೆ ಕೋರಿ ಪ್ರಮಾಣ ಪತ್ರ ಸಲ್ಲಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಆರೋಪಿ ವಕೀಲರು ಆರಂಭದಲ್ಲೇ ಬೇಷರತ್ ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಇದರಿಂದ ಅವರ ಕ್ಷಮಾಪಣೆಯ ಪ್ರಾಮಾಣಿಕತೆಯನ್ನು ಅನುಮಾನಿಸಲು ಕಾರಣವಿಲ್ಲ ಎಂದು ಅಭಿಪ್ರಾಯಪಟ್ಟ ಪೀಠ, ಆರೋಪಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಕ್ತಾಯಗೊಳಿಸಿತು. ಅಲ್ಲದೆ, ಇಂತಹ ಪ್ರತಿಭಟನೆಗಳ ಸಂದರ್ಭದಲ್ಲೂ ವಕೀಲರು ಕಲಾಪಕ್ಕೆ ಅಡ್ಡಿಪಡಿಸುವ ರೀತಿಯಲ್ಲಿ ವರ್ತಿಸುವಂತಿಲ್ಲ ಎಂದು ಸೂಚಿಸಿತು.

ಪ್ರಕರಣದ ಹಿನ್ನೆಲೆ

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಕೀಲರೊಬ್ಬರ ಹ೧ತ್ಯೆ ಮತ್ತು ವಕೀಲರ ಮೇಲಿನ ದೌರ್ಜನ್ಯ ಘಟನೆಗಳನ್ನು ಖಂಡಿಸಿ, ವಕೀಲರ ಮೇಲಿನ ದೌರ್ಜನ್ಯ ನಿಷೇಧ ಕಾಯ್ದೆ–2023’ರ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಎಎಬಿ ಹಾಗೂ ಇತರ ವಕೀಲರ ಸಂಘಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಆ ಸಂದರ್ಭದಲ್ಲಿ ಕೆಲ ವಕೀಲರು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣಕ್ಕೆ ಪ್ರವೇಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ್ದ ಆರೋಪವಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಗದ್ದಲ ಎಬ್ಬಿಸಲು ಯತ್ನಿಸಿದವರನ್ನು ಗುರುತಿಸುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿತ್ತು. ಈ ಪ್ರಕರಣವನ್ನು ನ್ಯಾಯಪೀಠ ಇದೀಗ ಮುಕ್ತಾಯಗೊಳಿಸಿ ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೊಟ್ಟ ಮೊದಲ ಬಾರಿಗೆ ಆಶಾ ಕಾರ್ಯಕರ್ತೆಯರಿಗಾಗಿ ಕರ್ನಾಟಕ ಬಂದ್; ನಾಳೆವರೆಗೂ ಡೆಡ್‌ಲೈನ್ ಕೊಟ್ಟ ವಾಟಾಳ್!
'ಬಸವಮಂಟಪ' ವಿವಾದ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಲೇಖಕ ರವಿ ಹಂಜಗಿಮಠ್!