
ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಈ ಮೂಲಕ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಈ ಮೂಲಕ ತನಿಖೆ ಮುಂದುವರೆಯಲಿದೆ.
ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಯಡಿಯೂರಪ್ಪ ಅವರು ತನ್ನ ಅಪ್ರಾಪ್ತ ಮಗಳನ್ನು ಕೊಣೆಯೊಳಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ಸ್ಪರ್ಶಿಸಿದ್ದಾರೆ ಎಂದು ದೂರುದಾರೆ ದೂರು ನೀಡಿದ್ದಾರೆ. ಅಡುಗೆ ಸಹಾಯಕರು, ಪರಿಚಾರಕರು, ಅಂಗರಕ್ಷಕರು, ಭೇಟಿ ಮಾಡಲು ಬಂದವರು ಸೇರಿ ಅನೇಕರು ಅರ್ಜಿದಾರರ ಸುತ್ತಮುತ್ತ ಕಣ್ಣಳತೆಯ ದೂರದಲ್ಲಿದ್ದರು. ಮೇಲಾಗಿ ಅವರಿಗೆ 82 ವರ್ಷ. ಫ್ಯಾನ್, ಲೈಟ್ ಸ್ವಿಚ್ ಒತ್ತಲಿಕ್ಕೂ ಆಗದು. ಹೀಗಿರುವಾಗ ಅವರು ಸಂತ್ರಸ್ತೆಯನ್ನು ಕೊಣೆಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ಸ್ಪರ್ಶಿಸಿದ್ದಾರೆಂದರೆ ಹೇಗೆ? ಸಂತ್ರಸ್ತೆ ತಾಯಿ ಆರೋಪಗಳೆಲ್ಲವೂ ಸುಳ್ಳು ಎಂದು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು.
ಅಲ್ಲದೆ ದೂರುದಾರೆ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರಿಗೆ ದೂರು ನೀಡುವುದು ಹವ್ಯಾಸವಾಗಿತ್ತು. ತನ್ನ ಗಂಡ, ಮಗನ ವಿರುದ್ಧವೇ ಆಕೆ ಕಳ್ಳತನದ ದೂರು ಕೊಟ್ಟಿದ್ದಾರೆ. ಆದ್ದರಿಂದ ಅರ್ಜಿದಾರರ ಸೂಚನೆಯಂತೆ ಪೊಲೀಸ್ ಆಯುಕ್ತರ ಬಳಿ ಹೋಗಿದ್ದ ದೂರುದಾರೆ, ಅರ್ಜಿದಾರರ ವಿರುದ್ಧ ಏನೂ ಹೇಳಿಕೆ ನೀಡಿಲ್ಲ. ಆದ್ದರಿಂದ ತನಿಖಾಧಿಕಾರಿಗಳು ಯಡಿಯೂರಪ್ಪ ವಿರುದ್ಧ ಸಂಗ್ರಹಿಸಿದ್ದಾರೆ ಎನ್ನಲಾದ ಸಾಕ್ಷ್ಯ ವಿಶ್ವಸಾರ್ಹವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣೀಸಬೇಕಿದೆ ಎಂದು ಕೋರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ