ಜಯಲಲಿತಾ ಕೆಜಿ ಗಟ್ಟಲೆ ಚಿನ್ನಾಭರಣ ತಮಿಳುನಾಡು ಹಸ್ತಾಂತರಕ್ಕೆ ಕರ್ನಾಟಕ ಹೈಕೋರ್ಟ್‌ ಲಗಾಮು!

By Suvarna News  |  First Published Mar 6, 2024, 6:01 PM IST

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಶಕ್ಕೆ ಪಡೆದಿರುವ  ದಿವಂಗತ ಜೆ.ಜಯಲಲಿತಾ ಅವರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ  ಮಧ್ಯಂತರ ಆದೇಶ ಮಾಡಿದೆ.


ಬೆಂಗಳೂರು (ಮಾ.6): ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಶಕ್ಕೆ ಪಡೆದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಗೆ ಸೇರಿದ ಚಿನ್ನಾಭರಣಗಳನ್ನು ನಗರದ ವಿಶೇಷ ನ್ಯಾಯಾಲಯ (36ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ) ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ.

ಚಿನ್ನಾಭರಣದ ಹಸ್ತಾಂತರಿಸುವ ಪ್ರಕ್ರಿಯೆ ಪ್ರಶ್ನಿಸಿ ಜಯಲಲತಾ ಅವರ ಸಹೋದರನ ಪುತ್ರಿ ಜೆ.ದೀಪ (ಜಯಾ ಸೊಸೆ) ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರ ಪೀಠ ಈ ಆದೇಶ ಮಾಡಿದೆ. ಇದೇ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ.26 ಕ್ಕೆ ಮುಂದೂಡಿದೆ.

Tap to resize

Latest Videos

ಭಿಕ್ಷಾಟನೆ ಜಾಗಕ್ಕೆ ಇಬ್ಬರು ಮಹಿಳೆಯರ ಕಿತ್ತಾಟ 'ದಯವಿಟ್ಟು ಆಕೆಗೆ ಹೆದರಿಸಿ ಸಾರ್' ಪೊಲೀಸ್‌ಗೆ ಭಿಕ್ಷುಕಿ ಕರೆ!

ಮಾ.6 ಮತ್ತು 7ರಂದು (ಬುಧವಾರ ಮತ್ತು ಗುರುವಾರ) ಚಿನ್ನಾಭರಣವನ್ನು ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಲು ವಿಶೇಷ ನ್ಯಾಯಾಲಯ ದಿನಾಂಕ ನಿಗದಿಪಡಿಸಿ ಇತ್ತೀಚೆಗೆ ಆದೇಶಿಸಿತ್ತು. ಹೈಕೋರ್ಟ್‌ನ ಈ ಮಧ್ಯಂತರ ಆದೇಶದಿಂದ ಚಿನ್ನಾಭರಣ ಹಸ್ತಾಂತರ ಪ್ರಕ್ರಿಯೆಗೆ ಸದ್ಯಕ್ಕೆ ನಿಂತಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಜಯಲಲಿತಾ ಅವರು ಮೃತರಾಗಿದ್ದರು. ಹೀಗಾಗಿ ಜಯಲಲಿತಾ ಅವರನ್ನು ಆರೋಪ ಮುಕ್ತರನ್ನಾಗಿಸಿ ಸುಪ್ರೀಂ ಕೋರ್ಟ್ ತೀರ್ಪುನಲ್ಲಿ ನೀಡಿದೆ. ಅರ್ಜಿದಾರರು ಜಯಲಲಿತಾ ಅವರ ಕಾನೂನು ಬದ್ಧ ವಾರಸುದಾರರಾಗಿದ್ದಾರೆ. ಆದ್ದರಿಂದ ಎಲ್ಲ ಚಿನ್ನಾಭರಣವನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸದೆ ಅರ್ಜಿದಾರರ ಸುಪರ್ದಿಗೆ ನೀಡಲು ಆದೇಶಿಸಬೇಕು ಎಂದು ಕೋರಿದರು. ಈ ಮನವಿ ಪರಿಗಣಿಸಿದ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ.

ಸೋಷಿಯಲ್‌ ಮೀಡಿಯಾ ಗೆಳತನಕ್ಕೆ 8 ಲಕ್ಷ ರೂ ಜತೆ ಚಿನ್ನ ಕಳೆದುಕೊಂಡ ಬೆಂಗಳೂರಿನ ವಿವಾಹಿತೆ!

ಪ್ರಕರಣದ ವಿವರ: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವೇಳೆ 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ತಮಿಳುನಾಡು ಭ್ರಷ್ನಾಚಾರ ನಿಗ್ರಹ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದರು. ನಗರದ ವಿಶೇಷ ನ್ಯಾಯಾಲಯ ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರು. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ನಂತರ ಜಯಲಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ ಖುಲಾಸೆಗೊಳಿಸಿದರೆ, ಸುಪ್ರಿಂ ಕೋರ್ಟ್‌ ಅವರು ಜಯಲಲಿತಾ ಸ್ನೇಹಿತೆ ಶಶಿಕಲಾ ನಟರಾಜ್‌ ಸೇರಿದಂತೆ ಇತರೆ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಈ ತೀರ್ಪು ಬರುವ ಮುನ್ನವೇ ಜಯಲಲಿತಾ ಅವರು ಸಾವನ್ನಪ್ಪಿದ್ದರಿಂದ ಅವರ ವಿರುದ್ಧದ ಪ್ರಕರಣವನ್ನು ಮಾತ್ರ ಸುಪ್ರೀಂ ಕೋರ್ಟ್‌ ರದ್ದುಪಡಿಸಿತ್ತು. ಇತ್ತೀಚೆಗೆ ವಿಶೇಷ ನ್ಯಾಯಾಲಯ (36ನೇ ಸಿಟಿ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ) ಚಿನ್ನಾಭರಣದ ಹಸ್ತಾಂತರಿಸುವುದಕ್ಕೆ 2024ರ ಮಾರ್ಚ್​ 6 ಮತ್ತು 7ರಂದು ದಿನಾಂಕವನ್ನು ನಿಗದಿಪಡಿಸಿತ್ತು. ಈ ಆದೇಶವನ್ನು ಜಯಾ ಸೊಸೆ ದೀಪಾ  ಪ್ರಶ್ನಿಸಿದ್ದಾರೆ.

click me!