ಮಾಜಿ ಸಚಿವ ಶ್ರೀರಾಮುಲುಗೆ ಬಂಧನದ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್!

By Sathish Kumar KHFirst Published Feb 23, 2024, 4:07 PM IST
Highlights

ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಬಂಧನದ ವಾರೆಂಟ್‌ ನೀಡುವುದಾಗಿ ಹೈಕೋರ್ಟ್‌ನಿಂದ ಖಡಕ್ ಎಚ್ಚರಿಕೆ ರವಾನಿಸಲಾಗಿದೆ.

ಬೆಂಗಳೂರು (ಫೆ.23): ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ್ದ ಮಾಜಿ ಸಚಿವ ಬಿ. ಶ್ರೀರಾಮುಲುಗೆ ಬಂಧನದ ವಾರೆಂಟ್‌ ನೀಡುವುದಾಗಿ ಹೈಕೋರ್ಟ್‌ ಎಚ್ಚರಿಕೆಯನ್ನು ನೀಡಿದೆ.

ಹೌದು, ಮಾಜಿ ಸಚಿವ ಶ್ರೀರಾಮುಲುಗೆ ಹೈಕೋರ್ಟ್ ಕ್ಲಾಸ್ ತೆಗೆದುಕೊಂಡಿದೆ. ಚುನಾವಣಾ  ಪ್ರಚಾರ ನಡೆಸಿ ನೀತಿ ಸಂಹಿತೆ ಉಲ್ಲಂಘನೆಯ ಕುರಿತು 2023ರ ಏ.28ರಂದು ಚುನಾವಣಾ ಆಧಿಕಾರಿ ನೀಡಿದ್ದ ಪ್ರಕರಣ ರದ್ದು ಕೋರಿ ಶ್ರೀರಾಮುಲು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಶ್ರೀರಾಮುಲು ಅವರ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜೊತೆಗೆ, ಅರ್ಜಿ ವಿಚಾರಣೆ ವೇಳೆ ಶ್ರೀರಾಮುಲು ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ತೀನೆಂದ ಮುಸ್ಲಿಂ ವ್ಯಕ್ತಿ ಬೇರಾರೂ ಅಲ್ಲ, ಸ್ವತಃ ರೈಲ್ವೆ ಇಲಾಖೆ ನೌಕರ

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಚುನಾವಣಾ ಆಯೋಗದ ಅನುಮತಿಯನ್ನು ಪಡೆಯದೇ ಪಕ್ಷದ ಅಭ್ಯರ್ಥಿ ಪರ ರ್ಯಾಲಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಏ.28ರಂದು ಚುನಾವಣಾ ಅಧಿಕಾರಿ ದೂರು ದಾಖಲಿಸಿದ್ದರು. ಈ ಪ್ರಕರಣವು ಸದ್ಯಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದರೆ, ತಮ್ಮ ಮೇಲೆ ದಾಖಲಿಸಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ ಸಚಿವ ಶ್ರೀರಾಮುಲು ಅರ್ಜಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಪ್ರಕರಣ ರದ್ದುಕೋರಿ ಸಲ್ಲಿಕೆ ಮಾಡಿದ್ದ ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ಅರ್ಜಿದಾರರ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ. ಅರ್ಜಿದಾರರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಎಷ್ಟು ಬಾರಿ ಹಾಜರಾಗಿದ್ದಾರೆ? ಅವರಿಗೆ ಕೋರ್ಟ್‌ಗೆ ಹಾಜರಾಗುವಂತೆ ಎಷ್ಟು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ? ಎಂದು ಕೇಳಿದ್ದಾರೆ. ಆಗ ವಕೀಲರು ಈವರೆಗೆ 4 ಬಾರಿ ಸಮನ್ಸ್ ಜಾರಿ ಆಗಿದ್ದು, ಒಂದು ಬಾರಿಯೂ ಹಾಜರಾಗಿಲ್ಲ ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ.

ಕೊಡಗು ಜುಮ್ಮಾ ಮಸೀದಿಯಲ್ಲಿ ನಮಾಜ್ ಮಾಡಿದ ಮಹಿಳೆಗೆ 25 ವರ್ಷ ಬಹಿಷ್ಕಾರ; ಗಂಡನ ಅಂತ್ಯಕ್ರಿಯೆಗೂ ಅವಕಾಶವಿಲ್ಲ

ಇದಕ್ಕೆ ಕಿಡಿಕಾರಿದ ನ್ಯಾಯಾಧೀಶರು ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾದ ನಂತರ‌ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಮುಂದುವರೆದು, ಮುಂದಿನ ವಿಚಾರಣೆ ವೇಳೆ ಮ್ಯಾಜಿಸ್ಟ್ರೇಟ್ ಮುಂದೆ ಶ್ರೀರಾಮುಲು ಹಾಜರಾಗಬೇಕು. ಒಂದು ವೇಳೆ ಹಾಜರಾಗಲಿದ್ದಲ್ಲಿ ಬಂಧನ ವಾರಂಟ್ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ನ್ಯಾಯಾಧೀಶರು ಮಾಜಿ ಸಚಿವ ಬಿ. ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. 

click me!