
ಬೆಂಗಳೂರು (ಡಿ.10): ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳಿಂದ ಮಲಗುಂಡಿ ಸ್ವಚ್ಛಗೊಳಿಸುವ ಪದ್ಧತಿ ನಿಷೇಧ ಕಾಯ್ದೆಯನ್ನು (ಪ್ರಾಹಿಬಿಷನ್ ಆಫ್ ಎಂಪ್ಲಾಯಿಮೆಂಟ್ ಆ್ಯಸ್ ಮ್ಯಾನ್ಯುಯೆಲ್ ಸ್ಕ್ಯಾವೆಂಜರ್ ಅಂಡ್ ದೇರ್ ರಿಹ್ಯಾಬಿಲಿಟೇಷನ್ ಆಕ್ಟ್-2013) ಪರಿಣಾಮಕಾರಿಯಾಗಿ ಜಾರಿ ಮಾಡುವಂತೆ ಎಲ್ಲಾ ಸ್ಥಳೀಯ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಎಐಸಿಸಿಟಿಯುನ ಕರ್ನಾಟಕ ಘಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
ಲಾಕ್‌ಡೌನ್‌ನಿಂದಾಗಿ ರಾಜ್ಯಕ್ಕೆ ಎದುರಾಗಿದೆ ಆರ್ಥಿಕ ಸಂಕಷ್ಟ: ಬಿಎಸ್‌ವೈ ..
ಅಲ್ಲದೆ, ಕಾಯ್ದೆಯಡಿ ದಾಖಲಿಸಿದ ಎಫ್‌ಐಆರ್‌ಗಳ ಸಂಖ್ಯೆ ಹಾಗೂ ಅವುಗಳ ದಾಖಲೆ, ದೋಷಾರೋಪ ಪಟ್ಟಿಸಲ್ಲಿಸಿದ, ಶಿಕ್ಷೆಯಾದ, ವಿಚಾರಣೆಗೆ ಬಾಕಿಯಿರುವ, ಖುಲಾಸೆಯಾದ ಪ್ರಕರಣಗಳ ವಿವರಗಳನ್ನು ಸಲ್ಲಿಸಬೇಕು.
ಕಾಯ್ದೆಯ ಸಂಬಂಧ 2018ರ ಫೆ.23ರಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷೆಯಲ್ಲಿ ಕೈಗೊಂಡ ನಿರ್ಣಯದ ವಿವರ, ಮ್ಯಾನ್ಯುಯೆಲ್ ಸ್ಕಾ್ಯವೆಂಜರ್ (ಸಫಾಯಿ ಕರ್ಮಚಾರಿ) ಸಮೀಕ್ಷೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸಿದ ಸಮಿತಿಗಳು, ಅವುಗಳ ನಡೆಸಿದ ಸಭೆ ಮತ್ತುಕಾರ್ಯ ನಿರ್ವಹಣೆ ಕುರಿತು ವಿವರಗಳನ್ನು ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ