
ಬೆಂಗಳೂರು (ಮಾ.23): ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದೆ. ರಾಘವೇಂದ್ರ ಡಿ.ಜಿ. ಎಂಬುವವರು ಪಂಚಮಸಾಲಿಗೆ 2 ಎ ಮೀಸಲಾತಿ ನೀಡದಂತೆ ಪಿಐಎಲ್ ಅರ್ಜಿ ಸಲ್ಲಿಸಲಿದ್ದರು. ಕೇಂದ್ರ ಸರ್ಕಾರದ ಸಾಲಿಸಿಟರ್ 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಮಧ್ಯಂತರ ಆದೇಶ ತೆರವುಗೊಳಿಸಲಾಗಿದೆ.
ಹೀಗಾಗಿ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ನೀಡಲು ಅಡ್ಡಿ ಇಲ್ಲದಂತಾಗಿದೆ. 2 ಎ ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ದವಾಗಿರಬೇಕೆಂದು ಸೂಚನೆ ನೀಡಲಾಗಿದೆ.
ನಾಳೆ ಸಂಪುಟ ಸಭೆ ನಿರ್ಧಾರ:
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ನಾಳೆ ಸಂಜೆ 4ಗಂಟೆಗೆ ನಡೆಯುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪ್ರಕಾರ ಸರ್ಕಾರದಿಂದ ತಿರ್ಮಾನ ಹೊರಬೀಳುವ ಸಾಧ್ಯತೆ ಇದೆ. ಈ ಹಿಂದೆ ಘೋಷಣೆ ಮಾಡಿದಂತೆ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ. 2 ಡಿ ಪ್ರವರ್ಗದ ಮೂಲಕ 7% ಮೀಸಲಾತಿ ಸಾಧ್ಯತೆ.
ಪಂಚಮಸಾಲಿ ಮೀಸಲು ಬಗ್ಗೆ ನಾಡಿದ್ದು ನಿರ್ಧಾರ?
ಈಗಾಗಲೇ ಲಿಂಗಾಯತರು 3ಬಿ ಯಡಿ5% ಮೀಸಲಾತಿ ಪಡೆಯುತ್ತಿದ್ದಾರೆ. ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳು ಮತ್ತು ಜಾತಿಗಳು ಒಂದೇ ಸೂರಿನಡಿ ತರುವ ನಿರ್ಧಾರದ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ 2ಡಿ ಅನ್ನೋ ಪ್ರವರ್ಗ ದಡಿ 5% ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ 2% ಪಡೆಯಲಿದ್ದಾರೆ. ಈ ನಿರ್ಧಾರ ಜಾರಿಯಾದರೆ ಲಿಂಗಾಯತರು ಒಟ್ಟು 7 % ಮೀಸಲಾತಿ ಪಡೆಯಲಿದ್ದಾರೆ.
ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಕಾಯ್ದೆ ಬೋಗಸ್: ಸುರ್ಜೇವಾಲಾ ಆರೋಪ
ಇದರ ಜತೆಗೆ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಏರಿಕೆಯಾಗಲಿದೆ. ಸದ್ಯ ಒಕ್ಕಲಿಗರು 3ಎ ಪ್ರವರ್ಗದಡಿ 4% ಮೀಸಲಾತಿ ಪಡೆಯುತ್ತಿದ್ದಾರೆ. ನಾಳೆಯ ಸಂಪುಟ ಸಭೆಯಲ್ಲಿ 3ಎ ಪ್ರವರ್ಗ ರದ್ದು ಮಾಡಿ 2 ಸಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಈ ಪ್ರವರ್ಗದ ಮೂಲಕ ಹೆಚ್ಚುವರಿಯಾಗಿ 2% ಮೀಸಲಾತಿ ನೀಡಲು ಸರ್ಕಾರದ ಲೆಕ್ಕಾಚಾರ ಹಾಕಿಕೊಂಡಿದೆ. ಇದರಿಂದ 2ಸಿ ಮೂಲಕ ಮೀಸಲಾತಿ ಪ್ರಮಾಣ 6% ಕ್ಕೆ ಏರಿಕೆಯಾಗಲಿದೆ. ಸರ್ಕಾರದ ಈ ಕ್ರಮದಿಂದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹೆಚ್ಚಿನ ಬಲ ಸಿಗಲಿದೆ. ಹೀಗಾಗಿ ನಾಳೆಯ ಸಚಿವ ಸಂಪುಟ ಸಭೆ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ