ಡಿಕೆಶಿ ಐಟಿ ದಾಳಿ ಸಿಬಿಐ ತನಿಖೆ ಪ್ರಶ್ನಿಸಿ ಮೇಲ್ಮನವಿ

By Kannadaprabha NewsFirst Published Sep 8, 2020, 9:27 AM IST
Highlights

ಡಿಕೆ ಶಿವಕುಮಾರ್ ಮನೆ ಮೇಲಿನ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಸರ್ಕಾರದ ಕ್ರಮ ರದ್ದತಿಗೆ ನಿರಾಕರಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಬೆಂಗಳೂರು (ಸೆ.08) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಸರ್ಕಾರದ ಕ್ರಮ ರದ್ದತಿಗೆ ನಿರಾಕರಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಕುರಿತು ಶಶಿಕುಮಾರ್‌ ಶಿವಣ್ಣ ಮೇಲ್ಮನವಿ ಸಲ್ಲಿಸಿದ್ದು, ಅದನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಅಧೀನ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಿತು. ಜತೆಗೆ, ಮೇಲ್ಮನವಿಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 29ಕ್ಕೆ ಮುಂದೂಡಿತು. 2017ರ ಆಗಸ್ಟ್‌ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ ಅವರಿಗೆ ಸೇರಿದ ಬೆಂಗಳೂರು ಮತ್ತು ದೆಹಲಿಯ ನಿವಾಸಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ಹಣ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..!
 
ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸಿ ರಾಜ್ಯ ಸರ್ಕಾರ 2019ರ ಸೆ.29ರಂದು ದೇಶ ಹೊರಡಿಸಿದೆ. ಸರ್ಕಾರದ ಈ ಆದೇಶ ರದ್ದು ಕೋರಿ ಪ್ರಕರಣದಲ್ಲಿ ಆರೋಪಿಯಾದ ಶಶಿಕುಮಾರ್‌ ಶಿವಣ್ಣ ತಕರಾರು ಅರ್ಜಿ ಸಲ್ಲಿಸಿದ್ದರು.

click me!