
ಕರ್ನಾಟಕ ಉಚ್ಚ ನ್ಯಾಯಾಲಯವು (Karnataka High Court) ಖಾಲಿ ಇರುವ ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಸಂಸ್ಥೆಯ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆಯ ಹೆಸರು: ಡೇಟಾ ಎಂಟ್ರಿ ಸಹಾಯಕ
ಒಟ್ಟು ಹುದ್ದೆಗಳು: 21
ಕೆಲಸದ ಸ್ಥಳ: ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ಮಾಸಿಕ ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,500-81,100 ವೇತನ ನೀಡಲಾಗುತ್ತದೆ.
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 40 ವರ್ಷಗಳು
ಸಾಮಾನ್ಯ ಮತ್ತು ಒಬಿಸಿ (2A/2B/3A/3B) ಅಭ್ಯರ್ಥಿಗಳಿಗೆ: 350 ರು.
ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: 200
ಟೈಪಿಂಗ್ ಪರೀಕ್ಷೆ
ನೇರ ಸಂದರ್ಶನ
ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜೂನ್ 29-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ-28-2026
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜುಲೈ 28-2026
ಮೊದಲು ಹೈಕೋರ್ಟ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಿ.
ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಗೂ ಅಗತ್ಯ ದಾಖಲೆಗಳನ್ನು (ID ಪ್ರೂಫ್, ವಿದ್ಯಾರ್ಹತೆ ಸರ್ಟಿಫಿಕೇಟ್, ಫೋಟೋ) ರೆಡಿ ಇಟ್ಟುಕೊಳ್ಳಿ.
ಕೆಳಗೆ ನೀಡಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿಯಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
https://judiciary.karnataka.gov.in/
ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ ‘Submit’ ಬಟನ್ ಒತ್ತಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ