ಮದರಸದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರಿಬ್ಬರ ಬಲತ್ಕಾರ ಪ್ರಕರಣ; ಕೇಸ್ ರದ್ದುಗೊಳಿಸಲು ಹೈಕೊರ್ಟ್‌ ನಿರಾಕರಣೆ

Published : Dec 13, 2024, 06:00 AM IST
ಮದರಸದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಶಿಕ್ಷಕರಿಬ್ಬರ ಬಲತ್ಕಾರ ಪ್ರಕರಣ; ಕೇಸ್ ರದ್ದುಗೊಳಿಸಲು ಹೈಕೊರ್ಟ್‌ ನಿರಾಕರಣೆ

ಸಾರಾಂಶ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕರ ವಿರುದ್ಧ ದೂರು ನೀಡದ ಮದರಸಾ ಟ್ರಸ್ಟಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಘಟನೆಯ ಮಾಹಿತಿಯಿದ್ದರೂ ದೂರು ದಾಖಲಿಸದ ಟ್ರಸ್ಟಿಯ ನಡೆ ಗಂಭೀರವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಬೆಂಗಳೂರು (ಡಿ.13) : ಅಪ್ರಾಪ್ತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಮದರಸಾವೊಂದರ ಶಿಕ್ಷಕರಿಬ್ಬರ ವಿರುದ್ಧ ಪೊಲೀಸರಿಗೆ ದೂರು ನೀಡದಿರುವುದಕ್ಕೆ ಮದರಸಾ ಸ್ಥಾಪಕ ಟ್ರಸ್ಟಿ ವಿರುದ್ಧದ ದಾಖಲಾದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ಪ್ರಕರಣದ ದೋಷಾರೋಪ ಪಟ್ಟಿ ರದ್ದುಪಡಿಸುವಂತೆ ಕೋರಿ ನಗರದ ಮಾಣಿಕ್ ಮಸ್ತಾನ್ ಮದರಸದ ಟ್ರಸ್ಟಿ ಮೊಹಮ್ಮದ್ ಅಮೀರ್ ರಾಜಾ (33) ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಆದೇಶಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಸೆಕ್ಷನ್ 21 ಪ್ರಕಾರ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತ ಮಾಹಿತಿ ಗಮನಕ್ಕೆ ಬಂದ ತಕ್ಷಣ ದೂರು ದಾಖಲಿಸಬೇಕಿರುತ್ತದೆ. ಪ್ರಕರಣದ ದೋಷಾರೋಪ ಪಟ್ಟಿಯನ್ನು ಪರಿಶೀಲಿಸಿದರೆ, ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಶಿಕ್ಷಕರ ಕೃತ್ಯ ಅತ್ಯಂತ ಭಯಾನಕವಾಗಿದೆ. ಮಾಹಿತಿಯ ಕೊರತೆಯಿರುವ ಮತ್ತು ನಿಯಂತ್ರಣ ಮಾಡದೇ ಇರುವುದರಿಂದ ಇಂತಹ ಹಲವು ಕೃತ್ಯಗಳು ಬೆಳಕಿಗೆ ಬರುವುದಿಲ್ಲ. ಸಂತ್ರಸ್ತರು ಸಹ ದೂರು ದಾಖಲಿಸುವುದಕ್ಕೆ ಮುಂದಾಗುವುದಿಲ್ಲ. ಆರೋಪಿಗಳ ಕೃತ್ಯದ ಬಗ್ಗೆ ಮಾಹಿತಿಯಿದ್ದರೂ ದೂರು ದಾಖಲಿಸದ ಅರ್ಜಿದಾರ ನಡೆ ಗಂಭೀರವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. 

ಮದುವೆಗೆ ಒಪ್ಪಂದ ಆಂಟಿಯನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಪ್ರಕರಣವೇನು?: ಪ್ರಕರಣದ ದೂರುದಾರರ (ಸಂತ್ರಸ್ತರ ತಂದೆ) ಸುಮಾರು 11 ವರ್ಷದ ಅಪ್ರಾಪ್ತ ಬಾಲಕ ಮಾಣಿಕ್ ಮಸ್ತಾನ್ ಮದರಸದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ದಿಢೀರ್‌ ಆಗಿ ಬಾಲಕ ಮದರಸಾಗೆ ಹೋಗುವುದಕ್ಕೆ ನಿರಾಕರಿಸಿದ್ದ. ಈ ಬಗ್ಗೆ ವಿಚಾರಣೆ ನಡೆಸಿದಾಗ, ಆತನ ಮೇಲೆ ಮದರಸದ ಶಿಕ್ಷಕರಿಬ್ಬರು 2023ರ ಜೂನ್‌ಯಿಂದ ಸೆಪ್ಟಂಬರ್ ತಿಂಗಳ ನಡುವೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿರುವ ಸಂಗತಿ ಬೆಳಕಿಗೆ ಬಂದಿತ್ತು. ಇದರಿಂದ ಸಂಪಿಗೆಹಳ್ಳಿಗೆ ರಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಘಟನೆಯ ಮಾಹಿತಿಯಿದ್ದರೂ ದೂರು ದಾಖಲಿಸಿಲ್ಲ ಎಂದು ಆರೋಪ ಅರ್ಜಿದಾರರ ಮೇಲಿದೆ. ಇದರಿಂದ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರು, ಮದರಸ ಶಿಕ್ಷಕರ ಕೃತ್ಯ ಕ್ಷಮಿಸಲಾಗುವುದಿಲ್ಲ. ಆದರೆ, ತಮಗೆ ಘಟನೆ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ಮಂಗಳೂರು: ಜೈಲಿನಿಂದ ಹೊರಬಂದ ದಿನವೇ ಕಳ್ಳತನ, 24 ಗಂಟೆಯಲ್ಲಿ ಮರಳಿ ಜೈಲಿಗೆ

ಈ ವಾದವನ್ನು ಆಕ್ಷೇಪಿಸಿದ್ದ ಸರ್ಕಾರದ ಪರ ವಕೀಲರು, ಅರ್ಜಿದಾರರು ಮದರಸದ ಸಂಸ್ಥಾಪಕ ಟ್ರಸ್ಟಿ. ಅವರಿಗೆ ಮದರಸದಲ್ಲಿ ಏನು ನಡೆಯುತ್ತಿದೆ ಎಂಬುದು ಗೊತ್ತಿರಲಿದೆ. ಆದರೂ, ಪ್ರಕರಣ ಸಂಬಂಧ ಪೊಲೀಸರಿಗೆ ದೂರು ನೀಡಿಲ್ಲ. ಇದೇ ಕಾರಣದಿಂದ ಆರೋಪಿ ಶಿಕ್ಷಕರು ಸಂತ್ರಸ್ತ ಬಾಲಕನಿಗೆ ಪದೇ ಪದೇ ಕಿರುಕುಳ ನೀಡಿದ್ದಾರೆ. ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌