RSS Case ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ನಕಾರ

Published : Oct 02, 2026, 07:30 AM IST
Priyank Kharge

ಸಾರಾಂಶ

ಆರ್‌ಎಸ್‌ಎಸ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಿಸಿದೆ. ಮ್ಯಾಜಿಸ್ಟ್ರೇಟ್ ಆದೇಶವನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾನಹಾನಿ ಮಾಡಲಾಗಿದೆ ಎಂಬ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಖಾಸಗಿ ದೂರಿನ ಸಂಜ್ಞೆ (ಕಾಗ್ನಿ ಜೆನ್ಸ್) ಪರಿಗಣಿಸಿರುವ ಜನಪ್ರತಿನಿಧಿಗಳ ವಿಶೇ ಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕ್ರಮ ರದ್ದು ಕೋರಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಮುಖಂಡ ಮೊಹ ಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರ ಪೀಠ, ಮ್ಯಾಜಿಸ್ಟ್ರೇಟ್ ಆದೇಶವನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಮರುಪರಿಶೀಲನಾ ಅರ್ಜಿಯ ಮೂಲಕ ಪ್ರಶ್ನಿಸಬಹುದಾಗಿದೆ. ಹೀಗಿರುವಾಗ ಹೈಕೋರ್ಟ್‌ ಗೆ ಏಕೆ ಸಲ್ಲಿಸಿದ್ದೀರಿ. ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಎಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ದೂರು ಪರಿಗಣಿಸದಿರುವುದನ್ನು ಪ್ರಶ್ನಿಸಿದ್ದ ತೇಜಸ್ ಅವರಿಗೂ ನ್ಯಾಯಾಲಯ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಪಡೆಯುವಂತೆ ನಿರ್ದೇಶಿಸಿತು.

ಪ್ರಕರಣದ ಹಿನ್ನೆಲೆ

ಕಳೆದ ವರ್ಷದ ಅ.4ರಂದು ಪ್ರಿಯಾಂಕ್ ಖರ್ಗೆ ಅವರು 'ಆರ್‌ಎಸ್‌ಎಸ್ ನವರು ಸರ್ಕಾರಿ ಜಾಗಗಳು ಮತ್ತು ಶಾಲಾ ಆವರಣದಲ್ಲಿ ಯಾವುದೇ ರೀತಿಯ ಸಮಾರಂಭ ಮತ್ತು ಚಟುವಟಿಕೆಗಳನ್ನು ಮಾಡದಂತೆ ನಿಷೇಧಿಸಬೇಕು. ಅವರು ಜನರಿಗೆ ತಪ್ಪು ಸಂದೇಶ ಕೊಡುತ್ತಿದ್ದು, ದೇಶಕ್ಕೆ ಮಾರಕವಾಗಿದ್ದಾರೆ. ಯುವಕರನ್ನು ತಪ್ಪು ದಾರಿಯಲ್ಲಿ ಕರೆದೊಯ್ಯು ತ್ತಿದ್ದಾರೆ' ಎಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ನಲ್ಲಿ 'ಗೌರಿ ಲಂಕೇಶ್, ಪಾನ್ಸರೆ ಮತ್ತು ಎಂ.ಎಂ. ಕಲಬುರ್ಗಿ ಅವರನ್ನು ಆರ್‌ಎಸ್‌ಎಸ್‌ನವರು ಹ*ತ್ಯೆ ಮಾಡಿದ್ದಾರೆ. ಅವರೇ ನೇರ ಹೊಣೆಗಾರರಾಗಿದ್ದು, ತಾಲಿಬಾನ್ ಸಂಸ್ಕೃತಿಯವ ರಾಗಿದ್ದಾರೆ' ಎಂದು ಪೋಸ್ಟ್ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

SIR: ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ, ಎಫ್‌ಐಆರ್‌ಗೆ ಪಟ್ಟು ಹಿಡಿದಿರೋದಕ್ಕೆ ಅಸಲಿ ಕಾರಣವೇನು?
ಮಲೇಷ್ಯಾ ಕನ್ನಡ ಸಂಘದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ: ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಹೆಜ್ಜೆ