
ಯಾದಗಿರಿ (ಮಾ.21): ಬಾಲಕಿ ಜೊತೆಗೆ ಅನುಚಿತ ವರ್ತನೆ ಆರೋಪದಡಿ ಯಾದಗಿರಿ ಜಿಲ್ಲೆಯ ಮಹಲ್ ರೋಜಾದ ಚಾಂಗ್‌ದೇವ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣದ ತನಿಖೆಗೆ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ತಡೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣ ದಾಖಲಾದ ಬಳಿಕ ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿರುವ ಹೈಕೋರ್ಟ್ ತನಿಖೆಗೆ ತಡೆ ನೀಡಿದ್ದು, ತಾತ್ಕಾಲಿಕ ರಿಲೀಫ್‌ನಿಂದ ಮುತ್ಯಾ ಹಾಗೂ ಭಕ್ತರ ವಲಯದಲ್ಲಿ ನಿಟ್ಟುಸಿರು ಮೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಬಾಲಕಿ ಜೊತೆಗಿನ ವರ್ತನೆಯ ದೃಶ್ಯಗಳು ವೈರಲ್ ಆದ ಬಳಿಕ ಶಹಾಪುರ ಸಿಡಿಪಿಓ ಫೆ.25ರಂದು ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.
ಪ್ರಕರಣದ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಮುತ್ಯಾ ಪರ ವಕೀಲರು, ನಂತರ ವಾಪಸ್ ಪಡೆದು, ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಮಾ.9ರಂದು ಬೇಲ್ ಅರ್ಜಿ ತಿರಸ್ಕೃತಗೊಳಿಸಿದ ಕೋರ್ಟ್ ತನಿಖೆಗೆ ಎಸ್ಪಿಗೆ ಸೂಚಿಸಿತ್ತು. ಅದರನ್ವಯ, ಶಹಾಪುರ ಠಾಣೆ ಪೊಲೀಸರು ತನಿಖೆಗೆ ಮುಂದಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ