Rape Case: ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ: ರಾಘವೇಶ್ವರಶ್ರೀಗೆ ಹೈಕೋರ್ಟ್‌ಲ್ಲೂ ಜಯ

Kannadaprabha News   | Asianet News
Published : Dec 30, 2021, 08:02 AM ISTUpdated : Dec 30, 2021, 08:03 AM IST
Rape Case: ರಾಮಕಥಾ ಗಾಯಕಿ ಮೇಲೆ ಅತ್ಯಾಚಾರ: ರಾಘವೇಶ್ವರಶ್ರೀಗೆ ಹೈಕೋರ್ಟ್‌ಲ್ಲೂ ಜಯ

ಸಾರಾಂಶ

*  ಸಿಐಡಿ, ರಾಮಕಥಾ ಗಾಯಕಿಯ ಮರುಪರಿಶೀಲನಾ ಅರ್ಜಿ ವಜಾ *  ಅಧೀನ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್‌ *  ರಾಘವೇಶ್ವರ ಸ್ವಾಮೀಜಿ ವಿರುದ್ಧ 2014 ರಲ್ಲಿ ದೂರು ಸಲ್ಲಿಸಿದ್ದ ರಾಮಕಥಾ ಗಾಯಕಿ   

ಬೆಂಗಳೂರು(ಡಿ.30):  ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ (Raghaveshwara Bharathi Swamiji) ಅವರನ್ನು ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ(Rape) ಆರೋಪದಿಂದ ಮುಕ್ತಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌(High Court) ಎತ್ತಿಹಿಡಿದಿದೆ.

ಅಧೀನ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ (ಸಿಐಡಿ ತನಿಖಾಧಿಕಾರಿ) ಮತ್ತು ರಾಮಕಥಾ ಗಾಯಕಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ವಿ.ಶ್ರಿಷಾನಂದ ಬುಧವಾರ ಪ್ರಕಟಿಸಿದರು. ತೀರ್ಪಿನಲ್ಲಿ, ಅಧೀನ ನ್ಯಾಯಾಲಯದ ಆದೇಶವು ಸೂಕ್ತವಾಗಿದೆ. ಅದರಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಇಲ್ಲ ಎಂದು ಆದೇಶಿಸಿದರು. ತನ್ಮೂಲಕ ಅಧೀನ ನ್ಯಾಯಾಲಯದ ಆದೇಶವನ್ನು ಊರ್ಜಿತಗೊಳಿಸಿದರು. ಇದರೊಂದಿಗೆ ಅತ್ಯಾಚಾರ ಆರೋಪದ ವಿರುದ್ಧ ರಾಘವೇಶ್ವರ ಭಾರತಿ ಸ್ವಾಮೀಜಿ ನಡೆಸುತ್ತಿರುವ ಕಾನೂನು ಹೋರಾಟಕ್ಕೆ ದೊಡ್ಡ ಗೆಲುವು ಸಿಕ್ಕಿದಂತಾಗಿದೆ.

'ಪರಿಶಿಷ್ಟ ಜಾತಿ, ಜನಾಂಗದವರಿಗೂ ರಾಮಚಂದ್ರಾಪುರ ಮಠದಲ್ಲಿ ಶಿಕ್ಷಣ ಲಭ್ಯ'

2014ರ ಪ್ರಕರಣ:

ರಾಮಕಥಾ ಗಾಯಕಿ 2014ರ ಆ.17ರಂದು ದೂರು ಸಲ್ಲಿಸಿ, ರಾಘವೇಶ್ವರ ಸ್ವಾಮೀಜಿ ತನ್ನ ಮೇಲೆ ಹಲವು ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ. ಸ್ವಾಮೀಜಿಯಿಂದ ತಾನು ಒಟ್ಟು 169 ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದರು. ದೂರಿನ ತನಿಖೆ(Investigation)ನಡೆಸಿದ್ದ ಸಿಐಡಿ(CID) ತನಿಖಾಧಿಕಾರಿಗಳು ಸ್ವಾಮೀಜಿ ವಿರುದ್ಧ ದೋಷಾರೋಪಪಟ್ಟಿ(Chargesheet) ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ 54ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪ ಕೈಬಿಟ್ಟು 2016ರ ಮಾ.31ರಂದು ಆದೇಶಿಸಿತ್ತು. ಅತ್ಯಾಚಾರ ಆರೋಪ ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷಾಧಾರಗಳು ಇಲ್ಲ. ತನಿಖಾಧಿಕಾರಿಗಳು ಒದಗಿಸಿರುವ ಸಾಕ್ಷ್ಯಗಳಿಂದ ಆರೋಪ ಹೊರಿಸುವುದಾಗಲಿ ಅಥವಾ ಸಾಕ್ಷ್ಯ ವಿಚಾರಣೆ ನಡೆಸುವುದಕ್ಕಾಗಲೀ ಸಾಧ್ಯವಾಗುವುದಿಲ್ಲ. ಆರೋಪ ಕೈಬಿಡಲು ಇದೊಂದು ಅರ್ಹ ಪ್ರಕರಣ. ಹಾಗಾಗಿ ಸ್ವಾಮೀಜಿಯನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿತ್ತು.

ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದ(Government of Karnataka) ಪರವಾಗಿ ಸಿಐಡಿ ತನಿಖಾಧಿಕಾರಿಗಳು ಹೈಕೋರ್ಟ್‌ಗೆ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತೆ ಸಹ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಐದು ವರ್ಷಗಳಿಂದ ಅರ್ಜಿಗಳ ಕುರಿತು ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್‌, 2021ರ ಡಿ.22ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ರಾಮಚಂದ್ರಾಪುರ ಮಠಕ್ಕೆ ಬ್ಲ್ಯಾಕ್‌ಮೇಲ್ : ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ

ಹೊಸನಗರದ ರಾಮಚಂದ್ರಾಪುರ ಮಠಕ್ಕೆ  10 ಕೋಟಿ ರು. ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದಲ್ಲಿ ತಮ್ಮ ವಿರುದ್ಧದ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ರಾಜು ಅಡಿ (ರಾಜಗೋಪಾಲ ಅಡಿ) ಸೇರಿದಂತೆ ಐದು ಜನರು ಮಾಡಿದ್ದ ಮನವಿಯನ್ನು ಬೆಂಗಳೂರು ನಗರ ನ್ಯಾಯಾಲಯ ತಿರಸ್ಕರಿಸಿತ್ತು.

ರಾಮಚಂದ್ರಾಪುರ ಮಠದ ಪರ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಶ್ರೀಮಠದ ಧರ್ಮಚಕ್ರ ಟ್ರಸ್ಟ್‌ನಲ್ಲಿ ಅವ್ಯವಹಾರ ಆಗಿದೆ ಎಂದು ರಾಜ್ಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇವೆ; ಅದು ವಿಚಾರಣೆಗೆ ಬರಲಿದ್ದು, ಮಠದ ಮರ್ಯಾದೆ ಹರಾಜು ಹಾಕುತ್ತೇವೆ ಎಂದು ಪ್ರಕರಣದ ಆರೋಪಿಗಳು ಶ್ರೀಮಠದ ಭಕ್ತರಿಗೆ ದೂರವಾಣಿ ಕರೆ ಮಾಡಿ, ಪಿಐಎಲ್‌ ವಾಪಾಸು ಪಡೆಯಬೇಕಿದ್ದರೆ   10 ಕೋಟಿ ರು. ನೀಡುವಂತೆ ಒತ್ತಾಯಿಸಿದ್ದರು. ಈ ಸಂಬಂಧ ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಂಗಳೂರಿನ ಗಿರಿನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಗಿರಿನಗರ ಪೊಲೀಸರು ಕುಟುಕು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದರು. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ಚಾಜ್‌ರ್‍ಶೀಟ್‌ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ಚಾರ್ಜ್‌ ಫ್ರೇಮಿಂಗ್‌ ಹಂತಕ್ಕೆ ಬಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ
ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ