ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ: ಹೈಕೋರ್ಟ್

Published : Feb 14, 2025, 12:44 PM ISTUpdated : Feb 14, 2025, 12:46 PM IST
ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ: ಹೈಕೋರ್ಟ್

ಸಾರಾಂಶ

ಮೃತ ಮಾವನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಘೋಷಿಸುವಂತೆ ಮೊದಲ ಪುತ್ರಿಯ ಪತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಯನ್ನು ಪ್ರತಿನಿಧಿಸಬಹುದು ಮತ್ತು ಅರ್ಜಿದಾರರು ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಬೆಂಗಳೂರು (ಫೆ.14) :  ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ (ಮೃತನ ಮೊದಲ ಪುತ್ರಿಯ ಪತಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ. ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಮೃತಪಟ್ಟ ವ್ಯಕ್ತಿಯ ಆಸ್ತಿ ಪ್ರತಿನಿಧಿಸುವ ಮತ್ತು ಹಿತಾಸಕ್ತಿ ರಕ್ಷಣೆ ಮಾಡುವ ಜವಾಬ್ದಾರಿ/ಕರ್ತವ್ಯ ಹೊಂದಿರುತ್ತಾನೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಮೃತರ ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಾಗುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ವಿರುದ್ಧ ಹೈಕೋರ್ಟ್ ಮೊರೆ ಹೋದ ನಿವೃತ್ತ ಜಡ್ಜ್!

ಪ್ರಕರಣದ ವಿವರ:

ಅರ್ಜಿದಾರರು ತನ್ನದೇ ಗ್ರಾಮದ ಮಹಿಳೆಯನ್ನು ವಿವಾಹವಾಗಿದ್ದರು. ಬಳಿಕ ಮಾವನ ಆಸ್ತಿಯಲ್ಲಿ ಪತ್ನಿಗೆ ಪಾಲು ನೀಡಲು ಆದೇಶಿಸಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಮಾವ (ಪತ್ನಿಯ ತಂದೆ) ಮೃತಪಟ್ಟಿದ್ದರು. ಇದರಿಂದ ತಾನೇ ಮಾವನ ಮನೆಗೆ ಮನೆ ಅಳಿಯ, ಅವರ ಆಸ್ತಿಯನ್ನು ಪ್ರತಿನಿಧಿಸುವ ಕಾನೂನುಬದ್ಧ ಉತ್ತರಾಧಿಕಾರಿಯಾಗಿ ನನ್ನನ್ನೇ ಘೋಷಣೆ ಮಾಡಬೇಕು ಎಂದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !