
ಉಡುಪಿ (ಮೇ 28): ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ 'ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ' ಎಂದು ತಿರುಗೇಟು ಕೊಟ್ಟಿದ್ದಾಳೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿದ್ಯಾರ್ಥಿನಿ ಅಲಿಯಾ ಅಸಾದಿ ಅವರು. 'ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ..? ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ' ಎಂದು ತಿರುಗೇಟು ನೀಡಿದ್ದಾರೆ.
Breaking: ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಉಚ್ಛಾಟನೆ
ಕಳೆದ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಅವರಿಗೆ ಎಂಎಲ್‌ಎ ಟಿಕಟ್ ನೀಡದೇ ನಿರಾಕರಿಸಲಾಯಿತು. ಆದರೆ, ಹೊಸಬ ಯಶ್ ಪಾಲ್ ಸುವರ್ಣಾ ಅವರಿಗೆ ಟಿಕಟ್ ನೀಡಲಾಗಿತ್ತು. ಈ ವೇಳೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸದೇ ತಮ್ಮ ಶಿಷ್ಯ ಯಶ್‌ಪಾಲ್ ಸುವರ್ಣಾ ಪರವಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡರು. ಇದಾದ ನಂತರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದರೂ ಟಿಕೆಟ್ ಸಿಗಲಿಲ್ಲ. ಆದರೆ, ವಿಧಾನ ಪರಿಷತ್‌ಗೆ ಟಿಕೆಟ್ ಕೊಡಲಾಗುತ್ತದೆ ಎಂದು ಕಾದು ಕುಳಿತಿದ್ದರೂ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ಕುಪಿತಗೊಂಡ ಮಾಜಿ ಶಾಸಕ ರಘುಪತಿ ಭಟ್ ಅವರು ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರವಾಗಿ ಸ್ಪರ್ಧೆ ಮಾಡಿದರು. ಇದರಿಂದ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷ ನಿಷ್ಠ ರಘುಪತಿ ಭಟ್‌ರಿಗೂ ಬಿಜೆಪಿ ನಾಯಕರಿಂದ ಮೋಸ: ಈಶ್ವರಪ್ಪ
ಉಡುಪಿಯಲ್ಲಿ ಹಿಜಾಬ್ ವಿವಾದವು ಉತ್ತುಂಗಕ್ಕೆ ತಲುಪಿದ್ದ ವೇಳೆ ಪಿಯು ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಅಲಿಯಾ ಅಸಾದಿ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇನೆ. ಹಿಜಾಬ್‌ಗೆ ಅವಕಾಶ ಕೊಡಲಿಲ್ಲವೆಂದರೆ ನಾನು ಪರೀಕ್ಷೆ ಬರೆಯುವುದಿಲ್ಲ ಎಂದು ಹೇಳಿದ್ದಳು. ಇದರಿಂದ ವಿದ್ಯಾರ್ಥಿನಿ ಅಲಿಯಾ ಅಸಾದಿ ಪರೀಕ್ಷೆಯಿಂದ ಉಚ್ಛಾಟನೆಗೊಂಡಿದ್ದಳು. ಆದರೆ, ರಿಪೀಟರ್ಸ್ ಪರೀಕ್ಷೆಯಲ್ಲಿ ಎಕ್ಸಾಂ ಬರೆದು ಉತ್ತೀರ್ಣಳಾಗಿ ಎಲ್‌ಎಲ್‌ಬಿ ಸೇರಿದ್ದಾಳೆ. ಆದರೆ, ಈಗ ಬಿಜೆಪಿಯಿಂದ ಉಚ್ಛಾಟನೆಗೊಂಡು ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿರುವ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಕಾನೂನು ವಿದ್ಯಾರ್ಥಿನಿ ಅಲಿಯಾ ಅಸಾದಿ ಟ್ವಿಟರ್ ಮೂಲಕ ತಿರುಗೇಟು ಕೊಟ್ಟಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ